ADVERTISEMENT

ನಿಟ್ಟೆಗೆ ಒಲಿದ ಕ್ರೀಡಾ ಪೋಷಕ ಪ್ರಶಸ್ತಿ ಗರಿ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 6:10 IST
Last Updated 6 ಡಿಸೆಂಬರ್ 2022, 6:10 IST

ಉಡುಪಿ: 2022ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿಗೆ ನಿಟ್ಟೆ ಎಜುಕೇಷನ್ ಟ್ರಸ್ಟ್‌ ಆಯ್ಕೆಯಾಗಿದೆ. ಕ್ರೀಡಾ ಕ್ಷೇತ್ರದಲ್ಲಿನ ಸಾಧನೆ ಹಾಗೂ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ಸ್ನೇಹಿ ವಾತಾವರಣ ನಿರ್ಮಾಣ ಮಾಡಿದ್ದಕ್ಕೆ ಪ್ರತಿಯಾಗಿ ನಿಟ್ಟೆ ಎಜುಕೇಷನ್‌ ಟ್ರಸ್ಟ್‌ ಮುಡಿಗೆ ಪ್ರಶಸ್ತಿಯ ಗರಿ ಒಲಿದಿದೆ.

ನಿಟ್ಟೆ ಎಜುಕೇಷನ್‌ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿಗಳೂ ಆಗಿರುವ ಡಾ.ವಿನಯ್‌ ಹೆಗಡೆ ಅವರ ದೂರದೃಷ್ಟಿತ್ವ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾ ಚಟುವಟಿಕೆಗಳ ಬೆಳವಣಿಗೆಗೆ ನೀಡಿರುವ ಆದ್ಯತೆಯ ಪ್ರತಿಫಲವಾಗಿ ಸಂಸ್ಥೆಗೆ ಕ್ರೀಡಾ ಪೋಷಕ ಪ್ರಶಸ್ತಿ ಬಂದಿದೆ ಎಂದು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಗಣೇಶ್ ಪೂಜಾರಿ ತಿಳಿಸಿದರು.

ನಿಟ್ಟೆ ಶಿಕ್ಷಣ ಸಂಸ್ಥೆಗಳಲ್ಲಿ ಅಂತರ ರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್‌, ಅಥ್ಲೆಟಿಕ್ಸ್‌, ಹಾಕಿ, ಫುಟ್‌ಬಾಲ್, ಬಾಸ್ಕೆಟ್‌ ಬಾಲ್‌ ಅಂಗಳಗಳನ್ನು ನಿರ್ಮಾಣ ಮಾಡಲಾಗಿದೆ. ಕ್ರೀಡಾ ಪ್ರತಿಭೆ ಇರುವ ವಿದ್ಯಾರ್ಥಿಗಳನ್ನು ಗುರುತಿಸಿ ವೇದಿಕೆ ನೀಡಲಾಗುತ್ತಿದೆ. ಸಂಸ್ಥೆಯ ಅರ್ಧದಷ್ಟು ಜಾಗವನ್ನು ಕ್ರೀಡಾ ಚಟುವಟಿಕೆಗಳಿಗೆ ಮೀಸಲಿಸಲಾಗಿದೆ.

ADVERTISEMENT

ನಿಟ್ಟೆ ಶಿಕ್ಷಣ ಸಂಸ್ಥೆಯುಕ್ರೀಡೆಗೆ ಕೊಟ್ಟ ಪ್ರೋತ್ಸಾಹದ ಫಲವಾಗಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಪ್ರಶಸ್ತಿ ಪಡೆದಿದ್ದಾರೆ ಎನ್ನುತ್ತಾರೆ ಡಾ.ಗಣೇಶ್ ಪೂಜಾರಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.