ADVERTISEMENT

ಮಾರ್ಚ್ 23ರಿಂದ ಕೆಎಂಸಿಯಲ್ಲಿ ತುರ್ತು ಸೇವೆ ಮಾತ್ರ 

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2020, 12:15 IST
Last Updated 20 ಮಾರ್ಚ್ 2020, 12:15 IST

ಉಡುಪಿ: ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ಮಾರ್ಚ್‌ 23ರಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿತುರ್ತು ಹಾಗೂ ಎಮರ್ಜೆನ್ಸಿ ಚಿಕಿತ್ಸೆಮಾತ್ರ ದೊರೆಯಲಿದೆ. ಹೊರರೋಗಿಗಳ ಸೇವೆ ಇರುವುದಿಲ್ಲ ಎಂದುಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

ಆಸ್ಪತ್ರೆಗೆ ಬರುವ ರೋಗಿಗಳನ್ನು ಹೊರಭಾಗದ ತಾತ್ಕಾಲಿಕ ತಪಾಸಣಾ ಕೇಂದ್ರದಲ್ಲಿ ಪರೀಕ್ಷಿಸಿ, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಮಾತ್ರ ತುರ್ತು ಚಿಕಿತ್ಸಾ ವಿಭಾಗಕ್ಕೆ ಕಳುಹಿಸಲಾಗುವುದು. ಐಸಿಯು ಹಾಗೂ ಶಸ್ತ್ರಚಿಕಿತ್ಸೆ ನಂತರದ ಐಸಿಯುಗಳಿಗೆ ಪ್ರವೇಶ ನಿರ್ಬಂಧ ಮುಂದುವರಿದಿದೆ. ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ ಇರಲಿವೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT