ADVERTISEMENT

ಕುಂದಾಪುರ: ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಚಟುವಟಿಕೆ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2022, 8:20 IST
Last Updated 21 ನವೆಂಬರ್ 2022, 8:20 IST
ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಚಟುವಟಿಕೆಗಳನ್ನು ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ರಾಧಾಕೃಷ್ಣ ಶೆಟ್ಟಿ ಉದ್ಘಾಟಿಸಿದರು.
ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಚಟುವಟಿಕೆಗಳನ್ನು ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ರಾಧಾಕೃಷ್ಣ ಶೆಟ್ಟಿ ಉದ್ಘಾಟಿಸಿದರು.   

ಕುಂದಾಪುರ: ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವ ಗುಣ, ಸಮಯ ಪ್ರಜ್ಞೆ, ಸೌಹಾರ್ದ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಎನ್.ಎಸ್.ಎಸ್. ಉತ್ತಮ ವೇದಿಕೆಯಾಗಿದೆ ಎಂದು ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ರಾಧಾಕೃಷ್ಣ ಶೆಟ್ಟಿ ಹೇಳಿದರು.

ಇಲ್ಲಿನ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತನಾಡಿದರು. ಎನ್.ಎಸ್.ಎಸ್. ಸ್ವಯಂ ಸೇವಕ ಪ್ರತಿನಿಧಿ ನಿತೇಶ್ ಇದ್ದರು. ಎನ್.ಎಸ್.ಎಸ್. ಸಹ ಯೋಜನಾಧಿಕಾರಿ ದೀಪಾ ಪೂಜಾರಿ ಸ್ವಾಗತಿಸಿದರು, ಎನ್.ಎಸ್.ಎಸ್. ಸ್ವಯಂ ಸೇವಕಿಯರಾದ ಪ್ರತೀಕ್ಷಾ ಪರಿಚಯಿಸಿದರು, ಅನುಷಾ ನಿರೂಪಿಸಿದರು.

ADVERTISEMENT

ಏಕತಾ ದಿನ ಆಚರಣೆ: ದೇಶದ ಮೊದಲ ಗೃಹ ಮಂತ್ರಿ ಸರ್ದಾರ ವಲ್ಲಭಬಾಯಿ ಪಟೇಲರ ನೆನಪಿನಲ್ಲಿ ನಡೆಯುವ ಏಕತಾ ದಿವಸವನ್ನು ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಆಚರಿಸಲಾಯಿತು. ಉಪನ್ಯಾಸಕ ಪ್ರವೀಣ ಮೊಗವೀರ ಗಂಗೊಳ್ಳಿ ಏಕತಾ ಪ್ರತಿಜ್ಞೆ ಬೋಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.