ADVERTISEMENT

ಕೆಲಸ ಯಾಂತ್ರಿಕವಾಗಿ ಮಾಡಬೇಡಿ ಸಮಸ್ಯೆ ಅರ್ಥಮಾಡಿಕೊಳ್ಳಿ: ಸಚಿವ ಕೋಟ

ಹೊಸ ಆಯುಷ್ಮಾನ್ ಕಾರ್ಯಕ್ರಮಕ್ಕೆ ಸಚಿವ ಕೋಟ ಚಾಲನೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 4:35 IST
Last Updated 13 ಸೆಪ್ಟೆಂಬರ್ 2022, 4:35 IST
ಕೋಟ ಗ್ರಾಮ ಪಂಚಾಯಿತಿಯಲ್ಲಿ ನಡೆದ ಹೊಸ ಆಯುಷ್ಮಾನ್ ಅಭಾ ಜಂಟಿ ಗುರುತಿನ ಚೀಟಿ, ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಉಚಿತ ಸೇವಾ ಅಭಿಯಾನ ಕಾರ್ಯಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು.
ಕೋಟ ಗ್ರಾಮ ಪಂಚಾಯಿತಿಯಲ್ಲಿ ನಡೆದ ಹೊಸ ಆಯುಷ್ಮಾನ್ ಅಭಾ ಜಂಟಿ ಗುರುತಿನ ಚೀಟಿ, ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಉಚಿತ ಸೇವಾ ಅಭಿಯಾನ ಕಾರ್ಯಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು.   

ಕೋಟ: ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಯಾಂತ್ರಿಕವಾಗಿ ಕೆಲಸ ಮಾಡದೇ ಗ್ರಾಮದ ಜನ ಮತ್ತು ಅಲ್ಲಿಯ ಸಮಸ್ಯೆಗಳನ್ನು ಅರ್ಥೈಸಿಕೊಂಡು ಕೆಲಸ ಮಾಡಿದಲ್ಲಿ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕೋಟ ಗ್ರಾಮ ಪಂಚಾಯಿತಿ, ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಎಜುಕೇರ್ ಗ್ರಾಮ ಒನ್ ಸೇವಾ ಕೇಂದ್ರದ ಸಹಯೋಗದೊಂದಿಗೆ ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ನಿಜವಾದ ಬಡವರಿಗೆ ಇಂತಹ ಸೌಲಭ್ಯಗಳು ಸಿಗಬೇಕು. ಯಾರೂ ಇದರಿಂದ ವಂಚಿತರಾಗಬಾರದು ಎಂದ ಅವರು ಕೋಟ ಗ್ರಾಮ ಪಂಚಾಯಿತಿ ಉಚಿತವಾಗಿ ಈ ಸೌಲಭ್ಯ ಗ್ರಾಮಸ್ಥರಿಗೆ ಒದಗಿಸುತ್ತಿರುವುದು ರಾಜ್ಯದ ಇತರೆ ಗ್ರಾಮ ಪಂಚಾಯಿತಿಗಳಿಗೆ ಮಾದರಿ’ ಎಂದರು.

ADVERTISEMENT

ಕೋಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜಿತ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷೆ ಜಯಂತಿ ಪೂಜಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ, ಕೋಟ ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಮೃತ್ ಜೋಗಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್, ಕೋಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿಶ್ವನಾಥ್, ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ, ಗ್ರಾಮ ಒನ್‌ನ ಮುಖ್ಯಸ್ಥ ಚೇತನ್‌ ಇದ್ದರು. ಚಂದ್ರ ಆಚಾರ್‌ ಸ್ವಾಗತಿಸಿದರು. ಚಂದ್ರ ಪೂಜಾರಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.