ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಹಾಗೂ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಓಣಂ ಸಂಭ್ರಮ ಕಾರ್ಯಕ್ರಮ ನಡೆಯಿತು
ಉಡುಪಿ: ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ, ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಓಣಂ ಸಂಭ್ರಮ ಕಾರ್ಯಕ್ರಮ ಈಚೆಗೆ ನಡೆಯಿತು.
ಕೇರಳ ಕಲ್ಚರಲ್ ಆ್ಯಂಡ್ ಸೋಷಿಯಲ್ ಸೆಂಟರ್ ಉಡುಪಿ ಅಸೋಸಿಯೇಷನ್‌ನ ಕಾರ್ಯದರ್ಶಿ ಬಿನೇಶ್ ವಿ.ಸಿ, ಪ್ರಾಂಶುಪಾಲೆ ವನಿತಾ ಮಯ್ಯ, ಉಪ ಪ್ರಾಂಶುಪಾಲ ಎಂ. ವಿಶ್ವನಾಥ್ ಪೈ, ಐಕ್ಯುಎಸಿ ಸಂಯೋಜಕಿ ಶೈಲಜಾ ಎಚ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ವೀರಾ ಐಡಾ ಪಿಂಟೊ, ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಸುಚಿತ್ ಕೋಟ್ಯಾನ್, ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥ ವಿಜಯ್ ಕುಮಾರ್ ಕೆ.ಎಂ. ಭಾಗವಹಿಸಿದ್ದರು.
ವಿದ್ಯಾರ್ಥಿನಿ ವಿಶ್ರತಾ ಸ್ವಾಗತಿಸಿದರು. ಅನುಶ್ರೀ ವಂದಿಸಿದರು. ಅಮಿಷಾ ಪ್ರಾಸ್ತಾವಿಕವಾಗಿ ಮಾತನಾಡಿದರು. ತ್ರಿವೇಣಿ ಶೆಟ್ಟಿ ನಿರೂಪಿಸಿದರು. ಕಾರ್ಯಕ್ರಮದ ನಂತರ ಓಣಂ ಸಾಂಸ್ಕೃತಿಕ ಕಾರ್ಯಕ್ರಮ, ಮನರಂಜನಾ ಸ್ಪರ್ಧೆಗಳು ನಡೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.