ADVERTISEMENT

‘ಆನ್‌ಲೈನ್‌ ಶಿಕ್ಷಣಕ್ಕೆ ಮೊಬೈಲ್, ನೆಟ್‌ವರ್ಕ್ ಇಲ್ಲ’

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 16:26 IST
Last Updated 23 ಜೂನ್ 2021, 16:26 IST

ಉಡುಪಿ: ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣ ಆರಂಭಿಸಿದ್ದರೂ ಗ್ರಾಮೀಣ ಭಾಗಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಹಾಗೂ ಮೊಬೈಲ್‌ ಇಲ್ಲದ ಕಾರಣ ಹಳ್ಳಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬೇಕಾಗಿದೆ ಎಂದು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಜಿಲ್ಲಾ ಕಾರ್ಯದರ್ಶಿ ಡಾ. ಹೀಮ್ ಹೂಡೆ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆನ್‌ಲೈನ್ ಶಿಕ್ಷಣ ಪಡೆಯಲು ಹೆಚ್ಚು ಸಮಸ್ಯೆ ಹೆದರಿಸುತ್ತಿದ್ದಾರೆ. ಕೂಡಲೇ ಸರ್ಕಾರ ಸಮಸ್ಯೆ ಬಗೆಹರಿಸಬೇಕು. ಆನ್‌ಲೈನ್ ಶಿಕ್ಷಣಕ್ಕೆ ಅಗತ್ಯವಾಗಿರುವ ಮೊಬೈಲ್ ಮತ್ತು ಸಮರ್ಪಕ ನೆಟ್‌ವರ್ಕ್ ವ್ಯವಸ್ಥೆಯನ್ನು ಗ್ರಾಮೀಣ ಭಾಗದಲ್ಲಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಹಾಗೂ ಖಾಸಗಿ ಶಾಲಾ ಆಡಳಿತ ಮಂಡಳಿ ನಡುವಿನ ಶುಲ್ಕ ಸಮರದಿಂದ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯ ಶಿಕ್ಷಕರಿಗೆ ಸಮಸ್ಯೆಯಾಗಿದೆ. ಶಿಕ್ಷಕರಿಗೆ ಸರಿಯಾಗಿ ಸಂಬಳ ಸಿಗುತ್ತಿಲ್ಲ. ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬೇಕಾಗಿದೆ ಎಂದು ದೂರಿದರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಅಯಾನ್ ಮಲ್ಪೆ, ಅರ್ಬಾಜ್, ಸ್ಥಾನೀಯ ಅಧ್ಯಕ್ಷ ವಸೀಮ್ ಗುಜ್ಜರಬೆಟ್ಟು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.