ಬ್ರಹ್ಮಾವರ: ಪಕ್ಷದ ಪ್ರತಿಯೊಬ್ಬರೂ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಪಕ್ಷ ಸಂಘಟನೆ ಮಾಡಬೇಕು. ಕಾರ್ಯಕರ್ತರು ಜನರಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಪ್ರಯತ್ನಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.
ಇಲ್ಲಿನ ಬಂಟರ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಕರ್ಜೆ ರಾಘವೇಂದ್ರ ಶೆಟ್ಟಿ ಅವರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ, ಸರ್ಕಾರ ಉಳಿಯುವುದಿಲ್ಲ ಎಂದು ಬಿಜೆಪಿಯ ಅಶೋಕ್ ಹಾಗೂ ವಿಜಯೇಂದ್ರ ಹೇಳಿದ್ದರು. ನಮ್ಮ ಸರ್ಕಾರ ಬಂದು 2 ವರ್ಷ ಆಗಿದ್ದು, ಸುಭದ್ರವಾಗಿದೆ. ಕೇಂದ್ರ ಸರ್ಕಾರ ಬಾಕಿ ಇರಿಸಿಕೊಂಡಿರುವ ಜಿಎಸ್‌ಟಿ ಮೊತ್ತವನ್ನು ರಾಜ್ಯಕ್ಕೆ ಕೊಡಿಸಲು ಬಿಜೆಪಿ ಸಂಸದರು ಪ್ರಯತ್ನ ಮಾಡುತ್ತಿಲ್ಲ. ಬಿಜೆಪಿಗರು ಅಭಿವೃದ್ಧಿಯ ವಿರೋಧಿಗಳು. ರಾಜ್ಯದಲ್ಲಿ ಸಮರ್ಥ ವಿರೋಧ ಪಕ್ಷವಾಗಿಯೂ ಅವರು ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಮುಖಂಡ ಜಯಪ್ರಕಾಶ ಹೆಗ್ಡೆ ಮಾತನಾಡಿ, ಕಾಂಗ್ರೆಸ್‌ನ ಅಂದಿನ ನಾಯಕರು ತುಂಬಾ ಉತ್ತಮ ಕೆಲಸ ಮಾಡಿದ್ದಾರೆ. ಆ ಇತಿಹಾಸ ಗೊತ್ತಿಲ್ಲದವರು ಏನೇನೋ ಮಾತನಾಡುತ್ತಿದ್ದಾರೆ. ನಮ್ಮ ನಾಯಕರು ಅಂದು ಮಾಡಿದ ಕೆಲಸಗಳನ್ನು ಜನರಿಗೆ ತಿಳಿಸುವ ಕೆಲಸವನ್ನು ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಮಾಡಬೇಕು. ರಾಘವೇಂದ್ರ ಶೆಟ್ಟಿ ಅವರು ನಿರಂತರ ತಿರುಗಾಡಿ ಪಕ್ಷ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ಯುವ ನಾಯಕ ಬೇಕೆಂದು ರಾಘವೇಂದ್ರ ಶೆಟ್ಟಿ ಅವರನ್ನು ನೇಮಿಸಲಾಗಿದೆ. ಮುಂದಿನ ಚುನಾವಣೆಗೆ 20 ಸಾವಿರ ಯುವ ಕಾರ್ಯಕರ್ತರನ್ನು ನೇಮಿಸಿಕೊಳ್ಳಲಿದ್ದೇವೆ. ಅದಕ್ಕೆ ರಾಘವೇಂದ್ರ ಶೆಟ್ಟಿ ತಂಡ ಪ್ರಯತ್ನಿಸಬೇಕು ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲವಾಗಿದ್ದು, ಅದನ್ನು ತಿಳಿಸುವ ಕೆಲಸ ಮಾಡಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ದಿನಕರ ಹೇರೂರು ಅವರು ನೂತನ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ದಿನಕರ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು.
ಮುನಿಯಾಲು ಉದಯ ಕುಮಾರ್ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಲಾವಣ್ಯ ಬಲ್ಲಾಳ್, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂರ್, ಸರಳ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉಡುಪಿ ಬ್ಲಾಕ್ ಅಧ್ಯಕ್ಷ ರಮೇಶ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಇಬ್ರಾಹಿಂ ಸಾಹೇಬ ಹಂಗಾರಕಟ್ಟೆ, ವೆರೋನಿಕಾ ಕರ್ನೇಲಿಯೊ, ಗೀತಾ ವಾಗ್ಲೆ, ಸುಕುಮಾರ ಕಾಪು, ಸಂತೋಷ ಕುಲಾಲ್ ಕಾಪು, ಕೋಟ ಬ್ಲಾಕ್ ಅಧ್ಯಕ್ಷ ಶಂಕರ ಕುಂದರ್, ಹರಿಪ್ರಸಾದ್ ರೈ, ಕಿರಣ ಹೆಗ್ಡೆ, ಸುರೇಶ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ, ಕೃಷ್ಣ ಶೆಟ್ಟಿ ಬಜಗೋಳಿ, ರಮೇಶ ಶೆಟ್ಟಿ ಹಾವಂಜೆ, ಭುಜಂಗ ಶೆಟ್ಟಿ ಬ್ರಹ್ಮಾವರ, ಇರ್ಮಾಡಿ ಸುಧಾಕರ ಶೆಟ್ಟಿ, ಮಲ್ಲಿಕಾ ಬಾಲಕೃಷ್ಣ ಪೂಜಾರಿ, ಗೋಪಿ ಕೆ. ನಾಯ್ಕ, ವಿವಿಧ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು. ಸುದೇಶ ಶೆಟ್ಟಿ ವಂದಿಸಿದರು. ವೀಕ್ಷಿತ್ ಶೆಟ್ಟಿ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.