ADVERTISEMENT

ಕುಂದಾಪುರ: ಜನತಾ ಪಿ.ಯು ಕಾಲೇಜಿನಲ್ಲಿ ಓರಿಂಟೇಶನ್

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 12:52 IST
Last Updated 2 ಜೂನ್ 2025, 12:52 IST
ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಾಣಿಜ್ಯ ವಿಭಾಗದ ಸಿಎ, ಸಿಎಸ್ ವಿದ್ಯಾರ್ಥಿಗಳಿಗೆ ಆಯೋಜಿಸಿದ ಓರಿoಟೇಷನ್ ಕಾರ್ಯಕ್ರಮ ಉದ್ಘಾಟಿಸಿ
ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಾಣಿಜ್ಯ ವಿಭಾಗದ ಸಿಎ, ಸಿಎಸ್ ವಿದ್ಯಾರ್ಥಿಗಳಿಗೆ ಆಯೋಜಿಸಿದ ಓರಿoಟೇಷನ್ ಕಾರ್ಯಕ್ರಮ ಉದ್ಘಾಟಿಸಿ   

ಕುಂದಾಪುರ: ‘ಮನಸ್ಸಿನ ಸಮಸ್ಯೆ ಸರಿಪಡಿಸಲು ವೈದ್ಯರು ಇದ್ದಾರೆ. ಆದರೆ ಮನಸ್ಥಿತಿಯ ಸಮಸ್ಯೆ ಸರಿ ಮಾಡಲು ಯಾರು ಬರುವುದಿಲ್ಲ. ನಾವೇ ಸರಿ ಮಾಡಿಕೊಳ್ಳಬೇಕು’ ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಗೋಪಾಲಕೃಷ್ಣ ಭಟ್ ಅಭಿಪ್ರಾಯಪಟ್ಟರು.

ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಾಣಿಜ್ಯ ವಿಭಾಗದ ಸಿ.ಎ ಹಾಗೂ ಸಿ.ಎಸ್ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಓರಿಂಟೇಷನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು

‘ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಮುನ್ನೆಡೆಯಬೇಕು. ನಮ್ಮ ಜೀವನದ ಯಶಸ್ಸಿಗೆ ಕಠಿಣ ಶ್ರಮ ಅಗತ್ಯ. ಸಾಧನೆಗೆ ಶ್ರಮವೇ ಗುರು. ಶ್ರಮ ನಮ್ಮದಾದರೆ ಅದಕ್ಕೆ ಪ್ರತಿಫಲ ಸಿಕ್ಕೆ ಸಿಗುತ್ತದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿ ದಿನ, ಪ್ರತಿ ಕ್ಷಣವನ್ನೂ ಶೈಕ್ಷಣಿಕ ಅಭ್ಯಾಸದಲ್ಲಿ ತೊಡಗಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಮೊಗವೀರ ಮಾತನಾಡಿ, ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ರೂಢಿಸಿಕೊಂಡು, ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿರುವ ನಮ್ಮ ಕಾಲೇಜಿನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ನಮ್ಮಲ್ಲಿ ಸಿಗುವ ಶೈಕ್ಷಣಿಕ ಅವಕಾಶಗಳನ್ನು ಬಳಸಿಕೊಂಡು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು’ ಎಂದು ಹೇಳಿದರು.

ಉಪ ಪ್ರಾಂಶುಪಾಲ ರಮೇಶ್ ಪೂಜಾರಿ ಮಾತನಾಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ಪ್ರತಾಪ್ ಹಾಜರಿದ್ದರು. ಉಪನ್ಯಾಸಕ ಆಲ್ತಾರು ನಾಗರಾಜ್ ಸ್ವಾಗತಿಸಿದರು. ಉದಯ್ ನಾಯ್ಕ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.