ಹೆಬ್ರಿ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಶನಿವಾರ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿಯಾಲು ಗೋಪಿನಾಥ ಭಟ್ ಅವರು ಆಸ್ಕರ್ ಫರ್ನಾಂಡಿಸ್ ಭಾವಚಿತ್ರಕ್ಕೆ ದೀಪ ಬೆಳಗಿ ಪುಷ್ಪನಮನ ಸಲ್ಲಿಸಿದರು.
ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಸಂದೀಪ್ ಆಚಾರ್ಯ, ಮುಖಂಡ ಕಬ್ಬಿನಾಲೆ ಚಂದ್ರಶೇಖರ ಬಾಯರಿ, ಗ್ರಾಮ ಪಂಚಾಯಿತಿ ಸದಸ್ಯರಾದ ಎಚ್.ಬಿ. ಸುರೇಶ್, ಎಚ್. ಜನಾರ್ದನ್, ಹೆಬ್ರಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಂಕರ ಶೇರಿಗಾರ್, ಮುಖಂಡರಾದ ನಿಲೇಶ್, ಪಡುಕುಡೂರು ಭಾರವಿ ಶೆಟ್ಟಿ, ರಾಘವೇಂದ್ರ ನಾಯ್ಕ್ ಇಂದಿರಾನಗರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.