ADVERTISEMENT

ಉಡುಪಿ: ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 15 ಮೇ 2025, 12:16 IST
Last Updated 15 ಮೇ 2025, 12:16 IST
ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಬುಧವಾರ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ಜರುಗಿತು
ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಬುಧವಾರ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ಜರುಗಿತು   

ಉಡುಪಿ: ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಬುಧವಾರ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ಜರುಗಿತು.

ಸರ್ಕಾರಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಪೋಷಕರಿಗೆ ಅರಿವು ಉಂಟು ಮಾಡುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿಯ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಹಾಗೂ ಉಪನ್ಯಾಸಕ ಯೋಗ ನರಸಿಂಹ ಸ್ವಾಮಿ ಪಾಲ್ಗೊಂಡಿದ್ದರು.

ಪ್ರೌಢಶಾಲೆಯ ಅಧ್ಯಕ್ಷ ರಮೇಶ್ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ನಗರಸಭೆಯ ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಮತ್ತು ಸದಸ್ಯೆ ಮಾನಸ ಪೈ, ಪ್ರೌಢಶಾಲೆ ಮುಖ್ಯ ಶಿಕ್ಷಕಿ ಪೂರ್ಣಿಮಾ, ಕುಸುಮ, ವಿರೂಪಾಕ್ಷ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಾಗೇಶ್ ಪ್ರಭು ಇದ್ದರು.

ADVERTISEMENT

ಅಜಿಮ್ ಪ್ರೇಮ್‍ಜಿ ಫೌಂಡೇಷನ್‌ನ ಯೋಗೀಶ್ ಹಾಗೂ ಪ್ರಕೃತಿ ಮಹಿತಿ ನೀಡಿದರು. ಜಯಶೀಲ ಬಿ. ರೋಟೆ ಕಾರ್ಯಕ್ರಮ ಸಂಘಟಿಸಿದ್ದರು. ಪೂರ್ಣಿಮಾ ಸ್ವಾಗತಿಸಿದರು. ಸರಿತಾ ರಾಣಿ ವಂದಿಸಿದರು. ರಂಜಿತ ನಿರೂಪಿಸಿದರು. ಆಶಾ ಸಹಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.