ಪಡುಬಿದ್ರಿ: ರಾಜ್ಯ ಹೆದ್ದಾರಿ ಮತ್ತು ಲೊಕೋಪಯೋಗಿ ಇಲಾಖಾ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳ ರಸ್ತೆ ಭೂ ಗಡಿಯ ಅಂಚಿನಿಂದ ಕಟ್ಟಡಗಳ ರೇಖೆಯ ಅಂತರ ಹಿಂದಿನ ಆದೇಶವನ್ನು ಪರಿಷ್ಕರಿಸಿ 6 ಮೀಟರ್‌ಗೆ ನಿಗದಿಗೊಳಿಸಿರುವ ನಿರ್ಧಾರವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ವಾಗತಿಸಿದ್ದಾರೆ.
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿರುವ ರಾಜ್ಯ ಹೆದ್ದಾರಿಗಳಲ್ಲಿ ಬರುವ ಸಿಟಿ ಕಾರ್ಪೋರೇಶನ್, ಸಿಟಿ ಮುನ್ಸಿಪಲ್ ಕೌನ್ಸಿಲ್, ಟೌನ್ ಮುನ್ಸಿಪಲ್ ಕೌನ್ಸಿಲ್, ಟೌನ್ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪರಿಮಿತಿಗಳಲ್ಲಿ ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂ ಗಡಿಯ ಅಂಚಿನಿಂದ ಕಟ್ಟಡಗಳ ರೇಖೆಯ ಅಂತರ 6 ಮೀ ಆಗಿದ್ದು ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳಿಗೆ 25 ಮೀ. ನಿಗದಿಗೊಳಿಸಲಾಗಿತ್ತು. ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು ರಾಜ್ಯ ಹೆದ್ದಾರಿಗಳಂತೆ ಜಿಲ್ಲಾ ಮುಖ್ಯ ರಸ್ತೆಗಳಿಗೂ ನಿಯಂತ್ರಣ ರೇಖೆ ನಿಗದಿಪಡಿಸುವಂತೆ ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.