ADVERTISEMENT

ಎಸ್‌ಡಿಪಿಐ ಗ್ರಾಮ ಸಮಿತಿ ಸಭೆ

ಕಾರ್ಯಕರ್ತರ ತಂಡ ಬಲಪಡಿಸಿಕೊಳ್ಳಲು ಕರೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2025, 2:48 IST
Last Updated 14 ನವೆಂಬರ್ 2025, 2:48 IST
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಡುಬಿದ್ರಿ ಗ್ರಾಮ ಸಮಿತಿಯ ಕಚೇರಿಯಲ್ಲಿ ಮುಂಬರುವ ಚುನಾವಣೆಗಳ ಪೂರ್ವ ಸಿದ್ಧತೆ ಮತ್ತು ಕಾರ್ಯತಂತ್ರ ಕುರಿತಂತೆ ವಿಶೇಷ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಮಾತನಾಡಿದರು
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಡುಬಿದ್ರಿ ಗ್ರಾಮ ಸಮಿತಿಯ ಕಚೇರಿಯಲ್ಲಿ ಮುಂಬರುವ ಚುನಾವಣೆಗಳ ಪೂರ್ವ ಸಿದ್ಧತೆ ಮತ್ತು ಕಾರ್ಯತಂತ್ರ ಕುರಿತಂತೆ ವಿಶೇಷ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಮಾತನಾಡಿದರು   

ಪಡುಬಿದ್ರಿ: ‘ಗ್ರಾಮಮಟ್ಟದಿಂದಲೇ ಚುನಾವಣೆಗೆ ಸಿದ್ಧತೆ ಪ್ರಾರಂಭಿಸಿ, ಪ್ರತಿ ಬೂತ್‌ನಲ್ಲಿ ಸಂಘಟನಾ ಕಾರ್ಯಕರ್ತರ ತಂಡವನ್ನು ಬಲಪಡಿಸಿಕೊಳ್ಳಬೇಕು’ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಡುಬಿದ್ರಿ ಗ್ರಾಮ ಸಮಿತಿ ವತಿಯಿಂದ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಚುನಾವಣೆಗಳ ಪೂರ್ವ ಸಿದ್ಧತೆ ಮತ್ತು ಕಾರ್ಯತಂತ್ರ ಕುರಿತಂತೆ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.

ಪ್ರತಿ ಘಟಕವು ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ, ಜನರ ಮನ ಗೆಲ್ಲುವ ರೀತಿಯಲ್ಲಿ ಪ್ರಚಾರ ಹಮ್ಮಿಕೊಳ್ಳಬೇಕು. ಪಕ್ಷದ ಸಂಘಟನಾ ಬಲವರ್ಧನೆ, ಮತದಾರರ ಸಂಪರ್ಕ ಮತ್ತು ಚುನಾವಣಾ ಪ್ರಚಾರ ತಂತ್ರಗಳ ಕುರಿತು ಮಾರ್ಗದರ್ಶನ ನೀಡಿದರು.

ADVERTISEMENT

ಎಸ್‌ಡಿಪಿಐ ಪಡುಬಿದ್ರಿ ಗ್ರಾಮ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀಝ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮುಂಬರುವ ಚುನಾವಣೆಗೆ ಸಂಬಂಧಿಸಿದ ಪೂರ್ವ ತಯಾರಿ, ಅಭ್ಯರ್ಥಿಗಳ ಆಯ್ಕೆ ಮಾನದಂಡ, ಪ್ರಚಾರ ತಂತ್ರ, ಮತದಾರರ ಜಾಗೃತಿ ಅಭಿಯಾನ, ಮತ್ತು ಮತಗಟ್ಟೆ ಮಟ್ಟದ ಹೋರಾಟದ ರೂಪುರೇಷೆಗಳ ಕುರಿತು ಚರ್ಚೆ ನಡೆಯಿತು.

ಎಸ್‌ಡಿಪಿಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಝಾಕ್ ವೈ.ಎಸ್. ಹಾಗೂ ಶಂಶುದ್ದೀನ್, ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ ಸಾದಿಕ್ ಕೆ.ಪಿ. ಹಾಗೂ ಕಾರ್ಯದರ್ಶಿ ತೌಫೀಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.