ADVERTISEMENT

ಸಾಹಿತ್ಯ ಸಮ್ಮೇಳನದ ಆಮಂತ್ರಣ ಬಿಡುಗಡೆ

ಫಕೀರ್ ಮುಹಮ್ಮದ್ ಕಟ್ಪಾಡಿ ಅಧ್ಯಕ್ಷತೆಯಲ್ಲಿ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 7:57 IST
Last Updated 4 ನವೆಂಬರ್ 2025, 7:57 IST
ಕಾಪು ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು
ಕಾಪು ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು   

ಪಡುಬಿದ್ರಿ: ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲ್ಲೂಕು ಘಟಕದ ವತಿಯಿಂದ ನ.15ರಂದು ಹೆಜಮಾಡಿ ಬಿಲ್ಲವರ ಸಂಘದ ಸಭಾಭವನದಲ್ಲಿ ನಡೆಯಲಿರುವ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಯು ಹೆಜಮಾಡಿ ಮಹಾಲಿಂಗೇಶ್ವರ ದೇವಳದಲ್ಲಿ ನಡೆಯಿತು.

ದೇವಳದ ಅರ್ಚಕ ಶ್ರೀನಿವಾಸ ಆಚಾರ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಮ್ಮೇಳನ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ದಯಾನಂದ ಹೆಜಮಾಡಿ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು. ಸಾಹಿತಿ ಫಕೀರ್ ಮುಹಮ್ಮದ್ ಕಟ್ಪಾಡಿ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ.

ಕಸಾಪ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಸಮ್ಮೇಳನದ ಕಾರ್ಯಾಧ್ಯಕ್ಷ ದಯಾನಂದ ಹೆಜಮಾಡಿ ಹಾಗೂ ಕ್ಷೇತ್ರದ ಅರ್ಚಕರನ್ನು ಗೌರವಿಸಿದರು.

ADVERTISEMENT

ಹೆಜಮಾಡಿ ಗ್ರಾ.ಪಂ.ಅಧ್ಯಕ್ಷೆ ರೇಷ್ಮಾ ಎ.ಮೆಂಡನ್, ಪ್ರಮುಖರಾದ ಬಿ.ಪುಂಡಲೀಕ ಮರಾಠೆ, ಸುಬ್ರಹ್ಮಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ ರಾವ್, ಪ್ರಾಣೇಶ್ ಹೆಜಮಾಡಿ, ಪವಿತ್ರಾ ಗಿರೀಶ್, ಸಂಜೀವ ಟಿ. ಹರೀಶ್‌ಕುಮಾರ್ ಹೆಜಮಾಡಿ, ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ, ವಿದ್ಯಾ ಅಮ್ಮಣ್ಣಾಯ, ಮಧುಕರ್ ಎಸ್.ಕಲ್ಯಾ, ದೇವದಾಸ್ ಪಾಟ್ಕರ್ ಮುದರಂಗಡಿ, ದೀಪಕ್ ಬೀರ, ಭರತ್ ಕಾಂಚನ್, ಸನಾ ಇಬ್ರಾಹಿಂ, ದೀಪಕ್ ಕೋಟ್ಯಾನ್, ಚಂದ್ರಹಾಸ್ ಕೋಟ್ಯಾನ್ ಇದ್ದರು.

ವಸ್ತುಪ್ರದರ್ಶನಕ್ಕೆ ಅವಕಾಶ: ಸಮ್ಮೇಳನದಲ್ಲಿ ಪುಸ್ತಕ ಮಳಿಗೆ, ಚಿತ್ರಕಲಾ ಪ್ರದರ್ಶನ, ವಸ್ತು ಪ್ರದರ್ಶನಕ್ಕೆ ಅವಕಾಶ ಇದೆ. ತಾಲ್ಲೂಕಿನ ಲೇಖಕರ ಪುಸ್ತಕ ಬಿಡುಗಡೆಗೂ ಅವಕಾಶ ಇದೆ. ಮಾಹಿತಿಗೆ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ಹೆಜಮಾಡಿ (9620382173) ಅವರನ್ನು ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.