ಪಡುಬಿದ್ರಿ: ಇಲ್ಲಿನ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿಗೆ ಹಳೆ ವಿದ್ಯಾರ್ಥಿಗಳು ಕುಡಿಯುವ ನೀರಿನ ಘಟಕ ಹಾಗೂ ಬಡ ಪ್ರತಿಭಾನ್ವಿತ ವಿದ್ಯಾರ್ಥಿನಿಯ ಶುಲ್ಕವನ್ನು ಪ್ರಾಂಶುಪಾಲರಿಗೆ ಹಸ್ತಾಂತರಿಸಿದರು.
1995ನೇ ಬ್ಯಾಚ್‌ನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ₹45 ಸಾವಿರ ಮೌಲ್ಯದ ಕುಡಿಯುವ ನೀರಿನ ಘಟಕ ಕೊಡುಗೆ ನೀಡಿದ್ದಾರೆ. ವಿಜ್ಞಾನ ವಿಭಾಗದ ಬಡ ಪ್ರತಿಭಾವಂತ ವಿದ್ಯಾರ್ಥಿನಿಗೆ ₹10 ಸಾವಿರ ಶುಲ್ಕವನ್ನು ಭರಿಸಿದ್ದಾರೆ.
ಪ್ರಾಂಶುಪಾಲ ಸಂಜೀವ ನಾಯ್ಕ್ ಮಾತನಾಡಿ, 1995 ಬ್ಯಾಚ್ ವಿದ್ಯಾರ್ಥಿಗಳು ಶ್ಲಾಘನೀಯ ಕಾರ್ಯ ಮಾಡಿದ್ದಾರೆ. ತಾವು ಕಲಿತ ಕಾಲೇಜನ್ನು ಮರೆಯದೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿರುವ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಟ್ಟಿದ್ದು, ಆಡಳಿತ ಮಂಡಳಿ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಹಳೆ ವಿದ್ಯಾರ್ಥಿಗಳಾದ ಅನಂತರಾಮ ರಾವ್, ಸುಬ್ರಹ್ಮಣ್ಯ ಶ್ಯಾನುಭಾಗ್, ಮುರಳಿ ಲಾಲಾಜಿ, ಪ್ರಕಾಶ್ ದೇವಾಡಿಗ, ರಮಾನಂದ ಪೂಜಾರಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.