ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳು ಗರೋಡಿ ಸಮೀಪ ನಿಯಂತ್ರಣ ತಪ್ಪಿದ ಬೈಕೊಂದು ರಸ್ತೆ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿ ಸಂಪೂರ್ಣ ಕರಕಲಾಗಿದ್ದು, ಸವಾರ ಗಂಭೀರ ಗಾಯಗೊಂಡಿದ್ದಾರೆ.
ಎರ್ಮಾಳು ಗುಜ್ಜಿ ನಿವಾಸಿ ಸೈಫಾನ್ ಗಾಯಗೊಂಡವರು. ಪಡುಬಿದ್ರಿ ಕಡೆಯಿಂದ ಮನೆಗೆ ಬರುತ್ತಿರುವಾಗ ನಿಯಂತ್ರಣ ತಪ್ಪಿ ಬೈಕ್ ಕಲ್ಲಿಗೆ ಢಿಕ್ಕಿ ಹೊಡೆದಿದೆ. ಗಾಯಳುವನ್ನು ಸಾರ್ವಜನಿಕರು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.