ಪಡುಬಿದ್ರಿ: ‘ತುಳುನಾಡಿನ ಪ್ರತಿ ಪದ್ಧತಿಗೂ ಅದರದೇ ಮಹತ್ವವಿದೆ. ಹಿರಿಯರಿಂದ ಸಂಸ್ಕೃತಿ ಉಳಿದಿದ್ದು, ಅದನ್ನು ಮುಂದುವರೆಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ’ ಎಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್ ಹೇಳಿದರು.
ಇಲ್ಲಿನ ಬಿಲ್ಲವ ಸಂಘದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ, ಶ್ರೀನಾರಾಯಣಗುರು ಮಹಿಳಾ ಮಂಡಳಿ, ಕಲ್ಪತರು ಮಹಿಳಾ ಸ್ವ–ಸಹಾಯ ಗುಂಪಿನ ಆಶ್ರಯದಲ್ಲಿ ಜರುಗಿದ ‘ಆಟಿದ ಲೇಸ್ ಕಾರ್ಯಕ್ರಮ’ವನ್ನು ಕಲಸಕ್ಕೆ ಭತ್ತ ತುಂಬುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕವಯಿತ್ರಿ ಸುಗಂಧಿ ಶ್ಯಾಮ್ ಆಟಿ ತಿಂಗಳಿನ ಮಹತ್ವದ ಬಗ್ಗೆ ಕವನ ವಾಚಿಸಿದರು. ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಆಡಳಿತ ಸಮಿತಿ ಅಧ್ಯಕ್ಷ ಸೀನ ಪೂಜಾರಿ, ಪಡುಬಿದ್ರಿ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಕೋಟ್ಯಾನ್, ಪಡುಬಿದ್ರಿ ಬಿಲ್ಲವ ಸಂಘದ ಕೋಶಾಧಿಕಾರಿ ಅಶೋಕ್ ಪೂಜಾರಿ ಪಾದೆಬೆಟ್ಟು, ಡಾ. ಐಶ್ವರ್ಯ ಸಿ ಅಂಚನ್, ಪಡುಬಿದ್ರಿ ಬಿಲ್ಲವ ಸಂಘದ ಅರ್ಚಕ ಚಂದ್ರಶೇಖರ ಶಾಂತಿ, ಬ್ರಹ್ಮಶ್ರೀ ನಾರಾಯಣಗುರು ಸೇವಾ ದಳದ ದಳಪತಿ ಸಂತೋಷ್ ನಂದಿಕೂರು, ಬಿಲ್ಲವ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ರೋಹಿಣಿ ಆನಂದ್ ಇದ್ದರು.
ಸುಜಾತಾ, ಪೂರ್ಣಿಮಾ ಪ್ರಾರ್ಥಿಸಿದರು. ಮಹಿಳಾ ವಿಭಾಗದ ಅಧ್ಯಕ್ಷೆ ರೋಹಿಣಿ ಆನಂದ್ ಸ್ವಾಗತಿಸಿದರು. ಚಿತ್ರಾಕ್ಷಿ ಕೆ. ಕೋಟ್ಯಾನ್ ಆಟಿ ರಸಪ್ರಶ್ನೆ ನಡೆಸಿಕೊಟ್ಟರು. ಸುಚರಿತ ಎಲ್ ಅಮೀನ್ ನಿರೂಪಿಸಿದರು. ತೇಜಾವತಿ ವಂದಿಸಿದರು.
ಮಹಿಳೆಯರಿಂದ ಜಾನಪದ ನೃತ್ಯ, ಗಾಯನ ಜರುಗಿತು. ಆಟಿ ವಿಶೇಷತೆಯ 20 ಬಗೆಯ ತಿನಿಸುಗಳನ್ನು ಉಣ ಬಡಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.