ಪಡುಬಿದ್ರಿ: ಪಡುಬಿದ್ರಿ ಪೇಟೆಯಲ್ಲಿ ಬುಧವಾರ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ವೇಳೆ, ಹೆಲ್ಮೆಟ್ ಧರಿಸದೆ ಸ್ಕೂಟರ್ ಚಲಾಯಿಸುತ್ತಿದ್ದ ಸವಾರನಿಗೆ ಎಸ್‌ಐ ಪ್ರಸನ್ನ ಅವರು ಹೊಸ ಹೆಲ್ಮೆಟ್ ವಿತರಿಸಿ ಜಾಗೃತಿ ಮೂಡಿಸಿದರು.
ಇಲ್ಲಿನ ರೋಟರಿ ಕ್ಲಬ್, ಪೊಲೀಸ್ ಠಾಣೆ, ಲಯನ್ಸ್ ಕ್ಲಬ್, ಇನ್ನರ್‌ವೀಲ್ ಕ್ಲಬ್, ರೋಟರ‍್ಯಾಕ್ಟ್ ಕ್ಲಬ್, ಕರ್ನಾಟಕ ಪಬ್ಲಿಕ್ ಸ್ಕೂಲ್ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ಕಾರ್ಯಕ್ರಮ ನಡೆಯಿತು.
ಶಾಲಾ ಮೈದಾನದಿಂದ ಪಡುಬಿದ್ರಿ ಪೇಟೆ, ಮಾರ್ಕೆಟ್ ರಸ್ತೆಯ ಮೂಲಕ ಜಾಗೃತಿ ಜಾಥಾ ನಡೆಯಿತು. ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ, ರಸ್ತೆ ದಾಟಲು ಝೀಬ್ರಾ ಕ್ರಾಸಿಂಗ್ ಬಳಕೆ ಬಗ್ಗೆ ಎಸ್‌ಐ ಪ್ರಸನ್ನ ಮಾಹಿತಿ ನೀಡಿದರು.
ರೋಟರಿ ಕ್ಲಬ್ ಅಧ್ಯಕ್ಷ ತಸ್ನೀನ್ ಅರ‍್ಹಾ, ಪೂರ್ವಾಧ್ಯಕ್ಷ ರಮೀಝ್ ಹುಸೈನ್, ಗಣೇಶ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣ ಪಿ. ಬಂಗೇರ, ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ರಾಜೇಶ್ವರಿ ಅವಿನಾಶ್, ಸ್ನೇಹಾ, ಮುದರಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ರಿಯಾಝ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಗೀತಾ ಶೆಟ್ಟಿ, ಪ್ರಾಥಮಿಕ ವಿಭಾಗದ ಜಾನೆಟ್ ಕ್ಲಾರಾ, ರೋಟರಿ ಕ್ಲಬ್‌ನ ಪುಷ್ಪಾ, ಶೋಭಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.