ADVERTISEMENT

ಪಡುಬಿದ್ರಿ: ಕನ್ನಂಗಾರ್ ಉರೂಸ್‌ಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2025, 14:14 IST
Last Updated 11 ಏಪ್ರಿಲ್ 2025, 14:14 IST
ಕನ್ನಂಗಾರ್ ಉರಿಸ್-2025ಕ್ಕೆ ಅಸಯ್ಯದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಳ್ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು
ಕನ್ನಂಗಾರ್ ಉರಿಸ್-2025ಕ್ಕೆ ಅಸಯ್ಯದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಳ್ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು   

ಪಡುಬಿದ್ರಿ: ಹೆಜಮಾಡಿಯ ಕನ್ನಂಗಾರ್ ಜುಮ್ಮಾ ಮಸೀದಿಯ ಮುಂಭಾಗದಲ್ಲಿರುವ ಶೈಖುನಾ ಸಿರಾಜುದ್ದೀನ್ ವಲಿಯುಲ್ಲಾಹಿ (ಖ.ಸಿ) ದರ್ಗಾ ಶರೀಫ್‌ನಲ್ಲಿ ಮೂರು ವರ್ಷಗಳಿಗೊಮ್ಮೆ ನಡೆಯುವ ಕನ್ನಂಗಾರ್ ಉರುಸ್‌ಗೆ ಧ್ವಜಾರೋಹಣದ ಮೂಲಕ ಶುಕ್ರವಾರ ಚಾಲನೆ ನೀಡಲಾಯಿತು. 

ಶುಕ್ರವಾರ ಜುಮಾ ನಮಾಜಿನ ಬಳಿಕ ಅಸಯ್ಯದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಳ್ ದರ್ಗಾದಲ್ಲಿ ದುವಾ ನೆರವೇರಿಸಿದರು.

ಜುಮಾ ಮಸೀದಿ ಮುದರ್ರಿಸ್ ಅಶ್ರಫ್ ಸಖಾಫಿ ಕಿನ್ಯ, ಕನ್ನಂಗಾರ್ ಉರುಸ್ ಸಮಿತಿಯ ಅಧ್ಯಕ್ಷ ಹಾಜಿ ಗುಲಾಂ ಮುಹಮ್ಮದ್ ಹೆಜಮಾಡಿ, ಉರುಸ್ ಸಮಿತಿಯ ಕಾರ್ಯದರ್ಶಿ ರಕೀಬ್ ಕನ್ನಂಗಾರ್, ಉಪಾಧ್ಯಕ್ಷ ಹನೀಫ್ ಹಾಜಿ, ಇಬ್ರಾಹಿಂ ಸನಾ, ಕೋಶಾಧಿಕಾರಿ ಹಾಜಿ ಕಬೀರ್, ಕನ್ನಂಗಾರ್ ಜುಮಾ ಮಸೀದಿ ಸಮಿತಿಯ ಅಧ್ಯಕ್ಷ ಹಮೀದ್ ಹಾಜಿ, ಉಪಾಧ್ಯಕ್ಷ ಅಬ್ದುಲ್ ಹಮೀದ್ ಮಿಲಾಫ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.