ಹೆಬ್ರಿ: ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025–26ನೇ ಸಾಲಿನ ಧ್ಯೇಯ ‘ಬದಲಾವಣೆಯ ಶಿಕ್ಷಣ– ಭವಿಷ್ಯದ ನಿರ್ಮಾಣ’ ಅಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಸ್ವಾತಂತ್ರ್ಯ ಹೋರಾಟಗಾರ ಪಡುಕುಡೂರುಬೀಡು ಎಂ.ಡಿ.ಅಧಿಕಾರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಣ್ಣಬಣ್ಣದ ಬಲೂನುಗಳನ್ನು ಮಕ್ಕಳ ಕೈಗಿತ್ತು ಚಪ್ಪಾಳೆಯೊಂದಿಗೆ ಶುಭಹಾರೈಸಿ ಶಾಲೆಗೆ ಬರಮಾಡಿಕೊಳ್ಳಲಾಯಿತು.
ಬಾಲ್ಬೆಟ್ಟು ಕಮಲಾಕ್ಷಿ ಶೆಟ್ಟಿ ಮತ್ತು ಮಕ್ಕಳು ಹಾಗೂ ಮನೆಯವರು ಕೊಡಮಾಡಿದ ಶಾಲಾ ಬ್ಯಾಗ್, ಲೇಖನ ಸಾಮಾಗ್ರಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಸರ್ಕಾರದಿಂದ ನೀಡಿದ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಹರೀಶ ಪೂಜಾರಿ, ಸದಸ್ಯರು, ಹಳೆವಿದ್ಯಾರ್ಥಿ ಸಂಘದ ಗೌರವ ಸಲಹೆಗಾರ ಸಂತೋಷ ಆಚಾರ್ಯ, ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಡುಕೂಡೂರು ಸೇವಾ ಪ್ರತಿನಿಧಿ ಚಿತ್ರಾ ಪೂಜಾರಿ, ಶಿಕ್ಷಕರಾದ ಶೃತಿ, ಶಾಲಿನಿ ಸುಕುಮಾರ್ ಆಚಾರ್ಯ, ಸುಜಾತಾ, ಸುದರ್ಶನ ಶೆಟ್ಟಿ, ಅಂಗನವಾಡಿ ಕಾರ್ಯಕರ್ತೆ ಸವಿತಾ, ಭಾಗವಹಿಸಿದ್ದರು. ಮುಖ್ಯಶಿಕ್ಷಕ ಹರೀಶ ಪೂಜಾರಿ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶೈಕ್ಷಣಿಕ, ಶಾಲಾಭಿವೃದ್ಧಿ ಚಟುವಟಿಕೆಗಳ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.