ADVERTISEMENT

‘ಪೇಜಾವರ ಶ್ರೀಗಳ ಅವಹೇಳನ ಖಂಡನೀಯ’

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2018, 11:43 IST
Last Updated 9 ಆಗಸ್ಟ್ 2018, 11:43 IST
ಪತ್ರಿಕಾಗೋಷ್ಠಿಯಲ್ಲಿ ಪ್ರಜಾಪ್ರಭುತ್ವ ಉಳಿಸಿ ಅಂದೋಲನ ವೇದಿಕೆ ಕಾರ್ಯಕರ್ತ ನಾಗೇಶ್‌ ಅಂಗೀರಸ ಮಾತನಾಡಿದರು.ಪ್ರಜಾವಾಣಿ ಚಿತ್ರ
ಪತ್ರಿಕಾಗೋಷ್ಠಿಯಲ್ಲಿ ಪ್ರಜಾಪ್ರಭುತ್ವ ಉಳಿಸಿ ಅಂದೋಲನ ವೇದಿಕೆ ಕಾರ್ಯಕರ್ತ ನಾಗೇಶ್‌ ಅಂಗೀರಸ ಮಾತನಾಡಿದರು.ಪ್ರಜಾವಾಣಿ ಚಿತ್ರ   

ಉಡುಪಿ: ಶಿರೂರು ಲಕ್ಷ್ಮೀವರ ಸ್ವಾಮೀಜಿ ಅವರ ಸಾವಿನ ಪ್ರಕರಣದಲ್ಲಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರ ವಿರುದ್ಧ ಅವಹೇಳನ ಮಾಡುವುದು ಸರಿಯಲ್ಲ ಎಂದು ಪ್ರಜಾಪ್ರಭುತ್ವ ಉಳಿಸಿ ಅಂದೋಲನ ವೇದಿಕೆ ಕಾರ್ಯಕರ್ತ ನಾಗೇಶ್‌ ಅಂಗೀರಸ ಅಸಮಾಧಾನ ವ್ಯಕ್ತಪಡಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವೇಶ ತೀರ್ಥ ಸ್ವಾಮೀಜಿ ಸನ್ಯಾಸ ನಿಷ್ಠೆ, ರಾಷ್ಟ್ರ ನಿಷ್ಠೆ, ಸಾಮಾಜಿಕ ನಿಷ್ಠೆ, ವಿಶಾಲ ಚಿಂತನೆಯನ್ನು ಹೊಂದಿದ್ದಾರೆ. ಇದೇ ಕಾರಣಕ್ಕೆ ಎಲ್ಲೆಡೆ ಅಪಾರ ಭಕ್ತರನ್ನು ಹೊಂದಿದ್ದಾರೆ. ಶಿರೂರು ಶ್ರೀಗಳ ಸಾವಿನ ಪ್ರಕರಣದಲ್ಲಿ ಅನಗತ್ಯವಾಗಿ ಪೇಜಾವರ ಶ್ರೀಗಳ ವಿರುದ್ಧ ಅವಹೇಳನ ಮಾಡುತ್ತಿರುವುದು ಅವರ ಅಭಿಮಾನಿಗಳು ಹಾಗೂ ಭಕ್ತರಿಗೆ ನೋವು ತಂದಿದೆ ಎಂದರು.

ಪೇಜಾವರ ಶ್ರೀಗಳು ಇಳಿವಯಸ್ಸಿನಲ್ಲಿಯೂ ಸಾಮಾಜಿಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಇತರೆ ಮಠಗಳು ಮಾಡಲಿ. ಶ್ರೀಗಳ ಅವಹೇಳನ ಸಲ್ಲದು ಎಂದರು.

ADVERTISEMENT

ಶಿರೂರು ಶ್ರೀಗಳು ರಾಜಕಾರಣಿಯಾಗಿದ್ದರೇ ಹೊರತು ಆದರ್ಶ ಸನ್ಯಾಸಿಯಾಗಿ ಗುರುತಿಸಿಕೊಂಡಿರಲಿಲ್ಲ. ಶಿರೂರು ಶ್ರೀಗಳು ತಮ್ಮ ಅಕಾಲಿಕ ಮರಣವನ್ನು ತಾವೇ ತಂದುಕೊಂಡಿದ್ದು, ಇದಕ್ಕೆ ಪೇಜಾವರ ಶ್ರೀಗಳತ್ತ ಬೊಟ್ಟುಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.