ADVERTISEMENT

ಉಡುಪಿ: ರೂಪಕಲಾ ಆಳ್ವಗೆ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2024, 14:28 IST
Last Updated 14 ಆಗಸ್ಟ್ 2024, 14:28 IST
ರೂಪಕಲಾ ಆಳ್ವ
ರೂಪಕಲಾ ಆಳ್ವ   

ಉಡುಪಿ: ಉಡುಪಿ ತುಳುಕೂಟವು ನೀಡುವ 29ನೇ ವರ್ಷದ ‘ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ’ಗೆ ಮಂಗಳೂರಿನ ಕರಂಗಲ್ಪಾಡಿಯ ರೂಪಕಲಾ ಆಳ್ವ ಅವರ ‘ಪಮ್ಮಕ್ಕೆನ ಪೊರುಂಬಾಟ’ ಕಾದಂಬರಿ ಆಯ್ಕೆಯಾಗಿದೆ.

ಪ್ರಶಸ್ತಿಯು ₹10 ಸಾವಿರ ನಗದು ಬಹುಮಾನ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಇದೇ 18 ರಂದು ಸಂಜೆ 4 ಗಂಟೆಗೆ ಯಕ್ಷಗಾನ ಕಲಾರಂಗದ ನೂತನ ಸಭಾಂಗಣ ಐವೈಸಿಯಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳುಕೂಟದ ಜಯಕರ್ ಶೆಟ್ಟಿ ಇಂದ್ರಾಳಿ ವಹಿಸಲಿದ್ದು, ಅತಿಥಿಗಳಾಗಿ ಕರ್ನಾಟಕ ತುಳುಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ, ಮಂಗಳೂರಿನ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ಉದ್ಯಮಿ ವೈ. ಸುಧೀರ್ ಕುಮಾರ್ ಮತ್ತು ಸಮಾಜಸೇವಕ ಯು. ವಿಶ್ವನಾಥ ಶೆಣೈ ಭಾಗವಹಿಸಲಿದ್ದಾರೆ.

ADVERTISEMENT

ಪ್ರಶಸ್ತಿ ಪುರಸ್ಕೃತ ಕಾದಂಬರಿಯನ್ನು ಅಮಿತಾಂಜಲಿ ಕಿರಣ್ ಅವರು ಪರಿಚಯಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ತುಳುಭಾಷೆಯನ್ನು ತೃತೀಯ ಐಚ್ಛಿಕ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಈ ಬಾರಿಯ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 100 ಅಂಕ ಪಡೆದ ಜಿಲ್ಲೆಯ 17 ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತದೆ ಎಂದು ತುಳುಕೂಟದ ಕಾರ್ಯದರ್ಶಿ ಗಂಗಾಧರ್ ಕಿದಿಯೂರು ಹಾಗೂ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಸಂಚಾಲಕಿ ತಾರಾ ಉಮೇಶ್ ಆಚಾರ್ಯ ತಿಳಿಸಿದ್ದಾರೆ.

ವಿಮರ್ಶಕ ಪ್ರೊ.ಮುರಳೀಧರ ಉಪಾಧ್ಯಾಯ ಹಿರಿಯಡ್ಕ, ಸಾಹಿತಿ ಪದ್ಮನಾಭ ರೈ ಪುತ್ತಿಗೆ, ಕಲಾವಿದ ಸಕು ಪಂಗಾಳ ಅವರು ತೀರ್ಪುಗಾರರಾಗಿ ಪ್ರಶಸ್ತಿಗೆ ಕಾದಂಬರಿಯನ್ನು ಆಯ್ಕೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.