ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಐವರ ಹೆಸರುಗಳು ಮುಂಜೂಣಿಯಲ್ಲಿವೆ.
ಭುಜಂಗ ಶೆಟ್ಟಿ, ಬೈಂದೂರಿನ ರಾಜು ಪೂಜಾರಿ, ಹರಿಪ್ರಸಾದ್ ರೈ, ಡಿ.ಆರ್. ರಾಜು ಮತ್ತು ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಅವರ ಹೆಸರುಗಳು ಕೇಳಿ ಬರುತ್ತಿವೆ.
ಭುಜಂಗ ಶೆಟ್ಟಿ ಮತ್ತು ರಾಜು ಪೂಜಾರಿ ಅವರು ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದಾರೆ. ಉದ್ಯಮಿ ಹರಿಪ್ರಸಾದ್ ರೈ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ಗಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.
ಪಕ್ಷದ ಅಭ್ಯರ್ಥಿ ಆಯ್ಕೆಯಲ್ಲಿ ಉಡುಪಿ ಜಿಲ್ಲೆಯ ಮುಖಂಡರಿಗೆ ಆದ್ಯತೆ ನೀಡಲಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಈಚೆಗೆ ಹೇಳಿದ್ದರು.
ಬಿಲ್ಲವ ಮತಗಳ ಸಂಖ್ಯೆ ಜಾಸ್ತಿ ಇರುವುದರಿಂದ ಬಿಲ್ಲವ ಸಮುದಾಯದವರಿಗೆ ಟಿಕೆಟ್ ನೀಡಬೇಕೆಂಬ ಒತ್ತಾಯ ಕೂಡ ಕಾರ್ಯಕರ್ತರಿಂದ ಕೇಳಿ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.