ADVERTISEMENT

ಪರ್ಯಾಯೋತ್ಸವಕ್ಕೆ ಅಗತ್ಯ ಸಹಕಾರ: ಸುನಿಲ್ ಕುಮಾರ್

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2021, 16:03 IST
Last Updated 21 ನವೆಂಬರ್ 2021, 16:03 IST
ಉಡುಪಿ ರಥಬೀದಿಯ ಶ್ರೀಕೃಷ್ಣ ಸಭಾಮಂದಿರದಲ್ಲಿ ಭಾವಿ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವದ ಸರ್ವಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸುನಿಲ್ ಕುಮಾರ್ ಮಾತನಾಡಿದರು.
ಉಡುಪಿ ರಥಬೀದಿಯ ಶ್ರೀಕೃಷ್ಣ ಸಭಾಮಂದಿರದಲ್ಲಿ ಭಾವಿ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವದ ಸರ್ವಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸುನಿಲ್ ಕುಮಾರ್ ಮಾತನಾಡಿದರು.   

ಉಡುಪಿ: ರಥಬೀದಿಯ ಶ್ರೀಕೃಷ್ಣ ಸಭಾಮಂದಿರದಲ್ಲಿ ಭಾವಿ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವದ ಸರ್ವಸಮಿತಿಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಮಾತನಾಡಿ, ಸರ್ಕಾರದಿಂದ ಪರ್ಯಾಯ ಮಹೋತ್ಸವಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಉಡುಪಿ ಶಾಸಕರೂ ಪರ್ಯಾಯ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾಪು ಶಾಸಕರಾದ ಲಾಲಾಜಿ ಮೆಂಡನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಸುಬ್ರಹ್ಮಣ್ಯ ಯಡಪಡಿತ್ತಾಯ ಉಪಸ್ಥಿತರಿದ್ದರು.

ADVERTISEMENT

ವಾಸುದೇವ ಪೆರಂಪಳ್ಳಿ ಪ್ರಾರ್ಥಿಸಿದರು. ಪರ್ಯಾಯ ಮಹೋತ್ಸವದ ಸಮಿತಿಯ ಅಧ್ಯಕ್ಷರಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ ಸ್ವಾಗತಿಸಿದರು. ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಧನ್ಯವಾದ ಸಮರ್ಪಿಸಿದರು. ಪಿಆರ್‌ಒ ಬಿ.ವಿ.ಲಕ್ಷ್ಮೀನಾರಾಯಣ ಕಾರ್ಯಕ್ರಮ ನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.