ADVERTISEMENT

ಮನೆಬಿಟ್ಟು ಹೊರಬಂದರೆ ಪಾಸ್‌ಪೋರ್ಟ್‌ ರದ್ದು

ಹೋಂ ಕ್ವಾರಂಟೈನ್‌ ನಿಯಮ ಕಡ್ಡಾಯವಾಗಿ ಪಾಲಿಸಿ: ಡಿಸಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2020, 16:23 IST
Last Updated 27 ಮಾರ್ಚ್ 2020, 16:23 IST

ಉಡುಪಿ: ಹೋಂ ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಗಳು ಹೊರಗಡೆ ಬಂದರೆ ಅಂಥವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಪಾಸ್‌ಪೋರ್ಟ್‌ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಡಿಸಿ ಜಗದೀಶ್‌ ಎಚ್ಚರಿಕೆ ನೀಡಿದ್ದಾರೆ.

ವಿದೇಶಗಳಿಂದ ಬಂದವರು ಮನೆಯcoroಲ್ಲಿರದೆ ಹೊರಗಡೆ ತಿರುಗುತ್ತಿರುವ ಕುರಿತು ದೂರುಗಳು ಬಂದಿದ್ದು, ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ವಿದೇಶಗಳಿಂದ ಬಂದವರು ಕಡ್ಡಾಯವಾಗಿ ಕ್ವಾರಂಟೈನ್ ಅವಧಿ ಮುಗಿಯುವವರೆಗೂ ಮನೆಯಲ್ಲಿಯೇ ಇರಬೇಕು. ‌

ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು, ಆರೋಗ್ಯ ಇಲಾಖೆ ಸಿಬ್ಬಂದಿಪ್ರತಿದಿನ ಮೂರುಬಾರಿ ಮನೆಗಳಿಗೆ ಭೇಟಿನೀಡಿ ಪರಿಶೀಲಿಸಲಿದ್ದಾರೆ. ಈ ವೇಳೆ ಹೋಂ ಕ್ವಾರಂಟೈನ್ ನಿಯಮ ಪಾಲಿಸದಿರುವುದು ಕಂಡುಬಂದರೆ ಪ್ರಕರಣ ದಾಖಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.