ADVERTISEMENT

ಶಿಲಾನ್ಯಾಸಕ್ಕೆ ಪೇಜಾವರ ಶ್ರೀಗಳಿಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 14:49 IST
Last Updated 3 ಆಗಸ್ಟ್ 2020, 14:49 IST

ಉಡುಪಿ: ಅಯೋಧ್ಯೆಯಲ್ಲಿ ಆ.5ರಂದು ನಡೆಯುವ ರಾಮಮಂದಿರ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.

ಪೇಜಾವರ ಶ್ರೀಗಳುಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ ಸದಸ್ಯರೂ ಆಗಿದ್ದಾರೆ. ಸದ್ಯ ನೀಲಾವರದಲ್ಲಿರುವ ಮಠದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಕಾರಣ ಶ್ರೀಗಳು ಶಿಲಾನ್ಯಾಸ ಕಾರ್ಯಕ್ರಮಕ್ಕೆ ತೆರಳುತ್ತಿಲ್ಲ. ಚಾತುರ್ಮಾಸ್ಯ ಮುಗಿದ ಬಳಿಕ ಅಯೋಧ್ಯೆಗೆ ಭೇಟಿನೀಡಲಿದ್ದಾರೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.

ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ರಾಜ್ಯದಿಂದ ಧರ್ಮಸ್ಥಳ ಧರ್ಮಾಧಿಕಾರಿಯಾಗಿರುವ ವೀರೇಂದ್ರ ಹೆಗ್ಗಡೆ, ಆದಿ ಚುಂಚನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮೀಜಿ ಸೇರಿದಂತೆ ಶೃಂಗೇರಿ ಮಠದ ಶ್ರೀ ಹಾಗೂ ಸುತ್ತೂರು ಶ್ರೀಗಳಿಗೆ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.