ADVERTISEMENT

ರಾಜ್ಯಸಭೆಗೆ ಹೆಗ್ಗಡೆ: ಪೇಜಾವರ ಶ್ರೀ ಸಂತಸ

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 16:25 IST
Last Updated 6 ಜುಲೈ 2022, 16:25 IST
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ   

ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿರುವುದು ಸಂತಸದ ವಿಚಾರ ಎಂದು ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ತಿಳಿಸಿದ್ದಾರೆ.

ಶ್ರೀಕ್ಷೇತ್ರದ ಮೂಲಕ ರಾಷ್ಟ್ರದ ಏಳ್ಗೆಗೆ ಬಹುಮುಖಿ ಹಾಗೂ ಅತ್ಯಂತ ಪರಿಣಾಮಕಾರಿ ಕೊಡುಗೆ ನೀಡಿರುವ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಿಯುಕ್ತಿಗೊಳಿಸಿರುವುದು ರಾಜ್ಯಸಭೆಯ ಘನತೆ ನೂರ್ಮಡಿಸಿದಂತಾಗಿದೆ. ಅವರ ಆಯ್ಕೆ ನಾಡು ಸಂತಸ ಪಡುವಂತಾಗಿದೆ ಎಂದು ಶ್ರೀಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT