ADVERTISEMENT

ಬ್ರಾಹ್ಮಣರ ಅವಹೇಳನ: ಪೇಜಾವರ ಸ್ವಾಮೀಜಿ ಖಂಡನೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 14:22 IST
Last Updated 23 ಫೆಬ್ರುವರಿ 2021, 14:22 IST
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ   

ಉಡುಪಿ: ಪೊಗರು ಸಿನಿಮಾದಲ್ಲಿ ಬ್ರಾಹ್ಮಣರ ಅವಹೇಳನ ಖಂಡನೀಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಸಮಾಜದಲ್ಲಿ ಎಲ್ಲರೂ ನೆಮ್ಮದಿಯಿಂದ ಬದುಕುಬೇಕಾದರೆ ಸಮಾಜವನ್ನು ನಿಂದಿಸುವ ಕೃತ್ಯಗಳಿಗೆ ಕೈಹಾಕಬಾರದು. ಒಂದು ಸಮಾಜವನ್ನು ಕೆಣಕಿ, ನಿಂದಿಸಿ ಮತ್ತೊಂದು ಸಮಾಜ ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲ. ಜಾತಿಯನ್ನು ಅವಹೇಳನ ಮಾಡುವ ಕೃತ್ಯಗಳಿಗೆ ಯಾರೂ ಕೈಹಾಕಬಾರದು. ಪೊಗರು ಚಿತ್ರದಲ್ಲಿನ ವಿವಾದಿತ ದೃಶ್ಯಗಳಿಗೆ ಕತ್ತರಿ ಹಾಕಬೇಕು ಎಂದು ಸ್ವಾಮೀಜಿ ಒತ್ತಾಯಿಸಿದ್ದಾರೆ .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT