ADVERTISEMENT

ರಾಮಮಂದಿರ ಜಮೀನು ಖರೀದಿ ಅವ್ಯವಹಾರ ಆರೋಪ: ಚರ್ಚೆ

ಅಯೋಧ್ಯೆಯಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2021, 16:32 IST
Last Updated 30 ಜೂನ್ 2021, 16:32 IST
ಅಯೋಧ್ಯೆಯ ರಾಮಮಂದಿರ ನಿರ್ಮಾಣ ಸ್ಥಳಕ್ಕೆ ಬುಧವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿನೀಡಿ ಕಾಮಗಾರಿ ವೀಕ್ಷಿಸಿದರು.
ಅಯೋಧ್ಯೆಯ ರಾಮಮಂದಿರ ನಿರ್ಮಾಣ ಸ್ಥಳಕ್ಕೆ ಬುಧವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿನೀಡಿ ಕಾಮಗಾರಿ ವೀಕ್ಷಿಸಿದರು.   

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಜಮೀನು ಖರೀದಿಯಲ್ಲಿ ಅವ್ಯವಹಾರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬುಧವಾರ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಚರ್ಚೆ ನಡೆಸಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಸಭೆಯಲ್ಲಿ ಟ್ರಸ್ಟ್‌ನ ಕಾರ್ಯದರ್ಶಿ, ಖಜಾಂಚಿ ಹಾಗೂ ಸದಸ್ಯರು ಭಾಗವಹಿಸಿ ಅವ್ಯವಹಾರ ಆರೋಪಗಳ ಕುರಿತು ಚರ್ಚಿಸಿದ್ದು, ಇನ್ನೆರಡು ದಿನಗಳಲ್ಲಿ ಬಹಿರಂಗಪಡಿಸಲಿದ್ದಾರೆ. ಮಂದಿರಕ್ಕೆ ಜಮೀನು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂಬ ವಿಚಾರವನ್ನು ಪುರಾವೆ ಸಹಿತವಾಗಿ ಸಮಾಜಕ್ಕೆ ತಿಳಿಯಲಿದೆ ಎಂದು ಸ್ವಾಮೀಜಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT