ADVERTISEMENT

ಅಯೋಧ್ಯೆ ತಲುಪಿದ ಪೇಜಾವರ ಶ್ರೀಗಳು: ಇಂದು ಸಭೆಯಲ್ಲಿ ಭಾಗಿ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 16:50 IST
Last Updated 31 ಅಕ್ಟೋಬರ್ 2020, 16:50 IST
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ   

ಉಡುಪಿ: ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾಗಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶನಿವಾರ ಅಯೋಧ್ಯೆ ತಲುಪಿದ್ದಾರೆ. ನ.1ರಂದು ನಡೆಯಲಿರುವ ಟ್ರಸ್ಟ್‌ನ ಸಭೆಯಲ್ಲಿ ಶ್ರೀಗಳು ಭಾಗವಹಿಸಲಿದ್ದಾರೆ.

ಶನಿವಾರ ಅಯೋಧ್ಯೆಯ ಸರ್ಕ್ಯೂಟ್‌ ಹೌಸ್‌ನಲ್ಲಿ ಟ್ರಸ್ಟ್‌ನ ಅನೌಪಚಾರಿಕ ಸಭೆ ನಡೆದಿದ್ದು, ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದ್ದು, ಕಾಮಗಾರಿಯನ್ನು ಎಲ್‌ ಅಂಡ್‌ ಟಿ ಸಂಸ್ಥೆ ನಡೆಸಲಿದೆ ಎಂಬ ವಿಚಾರ ಚರ್ಚೆಯಾಯಿತು. ಸಭೆಯಲ್ಲಿ ಚರ್ಚೆಯಾದ ವಿಚಾರಗಳನ್ನು ಟ್ರಸ್ಟ್‌ನ ಸದಸ್ಯರು ಪೇಜಾವರ ಶ್ರೀಗಳಿಗೆ ನೀಡಿದ್ದು, ಭಾನುವಾರದ ಔಪಚಾರಿಕ ಸಭೆಗೆ ಆಹ್ವಾನ ನೀಡಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT