ADVERTISEMENT

ಪ್ರಬಲ ಗೋಹತ್ಯಾ ನಿಷೇಧ ಕಾಯ್ದೆ ಅಗತ್ಯ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 15:20 IST
Last Updated 16 ಸೆಪ್ಟೆಂಬರ್ 2020, 15:20 IST
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ   

ಉಡುಪಿ: ರಾಜ್ಯದಲ್ಲಿ ನಿರಂತರ ಗೋಹತ್ಯೆ, ಗೋವುಗಳ ಕಳವು ನಡೆಯುತ್ತಿದ್ದು ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ. ಇಂತಹ ಕೃತ್ಯಗಳ ತಡೆಗೆ ಗೋಹತ್ಯಾ ನಿಷೇಧ ಕಾಯ್ದೆಯನ್ನು ಬಲಗೊಳಿಸಬೇಕಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಗೋವುಗಳ ಹತ್ಯೆ ತಡೆಗೆ ಪ್ರಬಲ ಕಾನೂನಿನ ಅವಶ್ಯಕತೆಯಿದ್ದು, ಸರ್ಕಾರ ಗೋಹತ್ಯಾ ನಿಷೇಧ ಕಾಯ್ದೆಯನ್ನು ಬಲಗೊಳಿಸಿಪ್ರಸಕ್ತ ಅಧಿವೇಶನದಲ್ಲಿ ಮಂಡಿಸಬೇಕು ಎಂದು ಪೇಜಾವರ ಸ್ವಾಮೀಜಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT