ADVERTISEMENT

ಯೋಗೀಶ್ವರ್‌ಗೆ ಸಚಿವ ಸ್ಥಾನ ಸಿಗಲೆಂಬುದು ವೈಯಕ್ತಿಕ ಅಭಿಪ್ರಾಯ: ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 8:52 IST
Last Updated 27 ನವೆಂಬರ್ 2020, 8:52 IST
ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ
ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ   

ಉಡುಪಿ:

ಸಂಪುಟ ಸಭೆ ತ್ವರಿತವಾಗಿ ನಿಶ್ಚಯವಾಗಿರುವುದರಿಂದ ಯಾರಿಗೂ ಸಭೆಯ ಬಗ್ಗೆ ಮಾಹಿತಿ ಇರಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣಹೇಳಿದರು.

ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಭಾಗವಹಿಸಲು ಶುಕ್ರವಾರ ಉಡುಪಿಗೆ ಬಂದಿದ್ದ ಸಂದರ್ಭ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಯೋಗೀಶ್ವರ್‌ಗೆ ಸಚಿವ ಸ್ಥಾನ ಕೊಡಬೇಕು ಎಂಬ ಒತ್ತಾಯ ಇದೆ. ಜವಾಬ್ದಾರಿ ಹೊತ್ತು‌ ಅವರು ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬದು ವೈಯಕ್ತಿಕ ಅಭಿಪ್ರಾಯ ಎಂದರು.

ADVERTISEMENT

ಸಂಪುಟ ವಿಸ್ತರಣೆ ಬಹಳ ಜಟಿಲ ವಿಚಾರವಾಗಿದ್ದು, ವರಿಷ್ಠರು ಹಾಗೂ ಮುಖ್ಯಮಂತ್ರಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಮಾಲೋಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ‌. ಅಲ್ಪಾವಧಿಯಲ್ಲಿ ಎಲ್ಲವೂ ಬಹಿರಂಗವಾಗಲಿದೆ ಎಂದು ಹೇಳಿದರು.

ಪಕ್ಷದಲ್ಲಿ ಮೂಲ ಬಿಜೆಪಿಗರು, ವಲಸಿಗರು ಎಂಬ ತಾರತಮ್ಯ ಇಲ್ಲ. ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗಬೇಕಾಗುತ್ತದೆ‌. ವಲಸೆ ಬಂದವರೂ ಸರ್ಕಾರ ರಚನೆಗೆ ಕಾರಣರಾಗಿದ್ದು, ಕುಟುಂಬದ ರೀತಿ‌ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ‌. ಯಾರಿಗೆ ಏನು ಸಲ್ಲಬೇಕು, ಅದು ಪಕ್ಷದಿಂದ ಸಿಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.