ADVERTISEMENT

ಉಡುಪಿ | ಪ್ಲಾಸ್ಟಿಕ್ ಬಳಕೆ: ಅಂಗಡಿಗಳ ಮೇಲೆ ದಾಳಿ, ದಂಡ ವಸೂಲಿ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 14:07 IST
Last Updated 13 ಜುಲೈ 2024, 14:07 IST

ಉಡುಪಿ: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರ ವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಉದ್ದೇಶದಿಂದ ನಗರಸಭೆ ನಿರಂತರ ಶ್ರಮಿಸುತ್ತಿದೆ.

ನಗರಸಭೆ ವತಿಯಿಂದ ಸಮೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಕಳೆದೆರಡು ದಿನಗಳಲ್ಲಿ ನಡೆಸಿದ ಸರ್ವೆಯಲ್ಲಿ ಅಂಗಡಿಯ ಸುತ್ತಮುತ್ತ ಸ್ವಚ್ಛತೆ ಕಾಯ್ದುಕೊಳ್ಳದೆ ಇದ್ದ 9 ಅಂಗಡಿಗಳ ಮಾಲೀಕರಿಗೆ ಒಟ್ಟು ₹8,300 ಹಾಗೂ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ 17 ಅಂಗಡಿಗಳ ಮೇಲೆ ದಾಳಿ ನಡೆಸಿ ₹46,500 ದಂಡ ವಸೂಲಿ ಮಾಡಲಾಗಿದೆ.

ನಗರಸಭೆಯ ಎಚ್ಚರಿಕೆಯ ಹೊರತಾಗಿಯೂ ಅಂಗಡಿ ಮಾಲೀಕರು ಸುತ್ತಮುತ್ತ ಪರಿಸರ ಸ್ವಚ್ಛವಾಗಿಟ್ಟುವಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಮತ್ತು ನಿಷೇಧಿತ ಪ್ಲಾಸ್ಟಿಕ್ ಬಳಕೆ ಕಂಡು ಬಂದಲ್ಲಿ ಅಂತಹ ಅಂಗಡಿಗಳ ಉದ್ದಿಮೆ ಪರವಾನಗಿ ರದ್ದುಪಡಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.