ADVERTISEMENT

ಬಾಲಕಿಗೆ ಲೈಂಗಿಕ ಕಿರುಕುಳ: ಪೋಕ್ಸೊ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 1:21 IST
Last Updated 7 ಆಗಸ್ಟ್ 2021, 1:21 IST

ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅನಂತ ಸೇರೆಗಾರ್ ಎಂಬಾತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

11 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಈಚೆಗೆ ಮಕ್ಕಳ ಸಹಾಯವಾಣಿಗೆ ದೂರು ಬಂದಿತ್ತು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದೂರಿನ ಮಾಹಿತಿ ಪಡೆದು ಬಾಲಕಿಯ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದಾಗ, ಲೈಂಗಿಕ ಕಿರುಕುಳ ನಡೆದ ವಿಚಾರ ಬೆಳಕಿಗೆ ಬಂತು ಎಂದು ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ತಿಳಿಸಿದರು.

ಲೈಂಗಿಕ ಕಿರುಕುಳ ಸಂಬಂಧ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.