ADVERTISEMENT

ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ

ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್‌

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2022, 13:47 IST
Last Updated 17 ನವೆಂಬರ್ 2022, 13:47 IST
ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವಮ್ಮಿ  ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಉದ್ಘಾಟಿಸಿ ಕ್ರೀಡಾಜ್ಯೋತಿ ಸ್ವೀಕರಿಸಿದರು.
ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವಮ್ಮಿ  ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಉದ್ಘಾಟಿಸಿ ಕ್ರೀಡಾಜ್ಯೋತಿ ಸ್ವೀಕರಿಸಿದರು.   

ಉಡುಪಿ: ಸಾರ್ವಜನಿಕರ ಸೇವೆಯಲ್ಲಿ ಪ್ರತಿದಿನ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಯ ಒತ್ತಡ ನಿವಾರಣೆಗೆ ಹಾಗೂ ಸದೃಢ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆಗಳು ಸಹಕಾರಿ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.

ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಪೊಲೀಸರು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ, ಕರ್ತವ್ಯದ ಅವಧಿಯಲ್ಲಿ ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ.

ಒತ್ತಡ ರಹಿತವಾಗಿ ಆರೋಗ್ಯಕರ ಜೀವನ ನಡೆಸಲು ಕ್ರೀಡೆಗಳು ಸಹಕಾರಿ. ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಪ್ರತಿಭೆ ಪ್ರದರ್ಶಿಸಿ ವೃತ್ತಿ ಬದುಕಿನಲ್ಲಿ ಸಾಧನೆ ಮಾಡಬಹುದು ಎಂದರು.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಮಾತನಾಡಿ, ಈ ಬಾರಿಯ ಕ್ರೀಡಾಕೂಟದಲ್ಲಿ 50 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ಪ್ರತ್ಯೇಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅಪರಾಧ ಪತ್ತೆ ವಿಭಾಗ ಮತ್ತು ಡಿಎಆರ್ ಸಿಬ್ಬಂದಿಗೆ ವಿಶೇಷ ಸ್ಪರ್ಧೆ ಹಾಗೂ ಕೆಸರುಗದ್ದೆ ಓಟದಂತಹ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಲಾಗಿದೆ. ಕ್ರೀಡಾಕೂಟದ ಮೂಲಕ ಪೊಲೀಸ್ ಸಿಬ್ಬಂದಿ ಒತ್ತಡವನ್ನು ಮರೆತು, ಕ್ರೀಡಾ ಸ್ಪೂರ್ತಿಯಿಂದ ಹಾಗೂ ಒಗ್ಗಟ್ಟಿನಿಂದ ಕರ್ತವ್ಯ ನಿರ್ವಹಿಸಲು ಸಹಕಾರಿಯಾಗಲಿದೆ ಎಂದರು.

ಕ್ರೀಡಾ ತಂಡಗಳಿಂದ ಪಥ ಸಂಚಲನ, ವಂದನೆ ಸ್ವೀಕಾರ ನಡೆಯಿತು. ಡಿಎಆರ್‌ನ ಜೀವನ್ ಕ್ರೀಡಾಜ್ಯೋತಿಯೊಂದಿಗೆ ಆಗಮಿಸಿದರು. ಡಿಎಆರ್ ಪಿಎಸ್‌ಐ ಆದರ್ಶ ದೇವಣ್ಣ ನಾಯಕ ಪ್ರತಿಜ್ಞಾ ವಿಧಿ ಭೋದಿಸಿದರು.

ಸೆನ್ ಠಾಣೆಯ ಇನ್‌ಸ್ಪೆಕ್ಟರ್ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಎಎಸ್‌ಪಿ ಸಿದ್ದಲಿಂಗಪ್ಪ ವಂದಿಸಿದರು. ಉಡುಪಿ, ಕಾರ್ಕಳ, ಕುಂದಾಪುರ, ಡಿ.ಎ.ಆರ್, ಮಹಿಳಾ ಪೊಲೀಸ್ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.