ADVERTISEMENT

ಪೊಲೀಸ್ ವಾರ್ಷಿಕ ಕ್ರೀಡಾಕೂಟ; ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2025, 3:13 IST
Last Updated 20 ನವೆಂಬರ್ 2025, 3:13 IST
ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಬಲೂನ್‌ ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು
ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಬಲೂನ್‌ ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು   

ಉಡುಪಿ: ಕ್ರೀಡಾಕೂಟಗಳಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಒತ್ತಡದ ಸನ್ನಿವೇಶಗಳಲ್ಲಿ ಕಾರ್ಯ ನಿರ್ವಹಿಸುವ ಪೊಲೀಸರ ದೈಹಿಕ ಆರೋಗ್ಯದ ಜೊತೆಗೆ ಮನಸ್ಸು ಕೂಡ ಲವಲವಿಕೆಯಿಂದ ಕೂಡಿರಲು ಕ್ರೇಡೆ ಸಹಕಾರಿ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.

ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025 ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಪೊಲೀಸರ ಕಾರ್ಯಕ್ಷಮತೆ ಹೆಚ್ಚುತ್ತದೆ. ಎಲ್ಲರೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.

ಪೊಲೀಸ್ ಇಲಾಖೆಯು ಅಚ್ಚುಕಟ್ಟಾಗಿ ಮತ್ತು ಶಿಸ್ತುಬದ್ಧವಾಗಿ ಕ್ರೀಡಾಕೂಟವನ್ನು ಆಯೋಜಿಸಿದೆ. ಕ್ರೀಡಾ ಮನೋಭಾವವನ್ನು ಹೆಚ್ಚಿಸುವ ಇಂತಹ ಕ್ರೀಡಾಕೂಟಗಳು ನಿಯಮಿತವಾಗಿ ನಡೆದಾಗ ದೇಹ ಸುಸ್ಥಿತಿಯಲ್ಲಿರುತ್ತದೆ ಎಂದೂ ಹೇಳಿದರು.

ADVERTISEMENT

ಪೊಲೀಸರು ಹಲವಾರು ದಿನಗಳವರೆಗೆ ನಿರಂತರವಾಗಿ ಕೆಲಸ ಮಾಡುವ ಸನ್ನಿವೇಶಗಳು ಎದುರಾಗುತ್ತವೆ. ಈ ಸಮಯದಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ಸಮರ್ಥವಾಗಿರಲು ನಿತ್ಯವೂ ಕ್ರೀಡೆ ಅಥವಾ ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಇತರ ಇಲಾಖೆಗಳು ಕೂಡ ಪೊಲೀಸ್ ಇಲಾಖೆಯಿಂದ ಸ್ಪೂರ್ತಿ ಪಡೆದು ಕ್ರೀಡಾಕೂಟಗಳನ್ನು ಆಯೋಜಿಸಿ ಆರೋಗ್ಯ ಸಿಬ್ಬಂದಿಯ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಸ್ವಾಗತಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ವಂದಿಸಿದರು.


ಪೊಲೀಸ್ ಕ್ರೀಡಾಕೂಟದಲ್ಲಿ ಉದ್ದ ಜಿಗಿತ ಸ್ಪರ್ಧೆ ನಡೆಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.