ADVERTISEMENT

ಉಡುಪಿ: ಬಿಜೆಪಿ ಗ್ರಾಮ ವಾಸ್ತವ್ಯ, ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2021, 17:04 IST
Last Updated 11 ಮಾರ್ಚ್ 2021, 17:04 IST
ಕುಯಿಲಾಡಿ ಸುರೇಶ್‌ ನಾಯಕ್‌
ಕುಯಿಲಾಡಿ ಸುರೇಶ್‌ ನಾಯಕ್‌   

ಉಡುಪಿ: ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಗುರಿಯಾಗಿಸಿಕೊಂಡು ಮಾರ್ಚ್‌ 20ರಿಂದ ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳುವುದಾಗಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 46 ಬಿಜೆಪಿ ಮಹಾಶಕ್ತಿ ಕೇಂದ್ರಗಳಿದ್ದು, 14 ನಗರ ಮಹಾಶಕ್ತಿ ಕೇಂದ್ರಗಳನ್ನು ಹೊರತುಪಡಿಸಿ ಗ್ರಾಮೀಣ ಭಾಗದ 32 ಮಹಾಶಕ್ತಿ ಕೇಂದ್ರಗಳಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುವುದು ಎಂದು ಮಾಹಿತಿ ನೀಡಿದರು

ಗ್ರಾಮವಾಸ್ತವ್ಯಕ್ಕೆ ಮೊದಲು ಮಹಾ ಶಕ್ತಿಕೇಂದ್ರಗಳಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿ, ಚುನಾವಣೆಗಳ ಕುರಿತು ಚರ್ಚೆ ನಡೆಲಾಗುತ್ತದೆ. ಬಳಿಕ ಕಾರ್ಯಕರ್ತರೊಬ್ಬರ ಮನೆಯಲ್ಲಿ ವಾಸ್ತವ್ಯ ಹೂಡಲಾಗುವುದು. ಜಿಲ್ಲೆಯಲ್ಲಿ 26 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹಾಗೂ 75 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಲಾಗಿದೆ ಎಂದರು.

ADVERTISEMENT

ಬೈಂದೂರು, ಉಡುಪಿ ಪಾದಯಾತ್ರೆ:ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ಷಡ್ಯಂತ್ರ ನಡೆಸಿ ಪ್ರತಿಭಟನೆ ನಡೆಯುವಂತೆ ಮಾಡುತ್ತಿದ್ದು, ಕೃಷಿ ಕಾಯ್ದೆಗಳ ಲಾಭವನ್ನು ಜನರಿಗೆ ತಿಳಿಸಲು ಏಪ್ರಿಲ್‌ 2ನೇ ವಾರದಲ್ಲಿ ಬೈಂದೂರಿನಿಂದ ಉಡುಪಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. 2ರಿಂದ 5 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಪ್ರದಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.