ADVERTISEMENT

ಉಡುಪಿ: ರಸ್ತೆ ಗುಂಡಿಗಳೊಂದಿಗೆ ಸೆಲ್ಫಿಅಭಿಯಾನ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2025, 5:11 IST
Last Updated 17 ಸೆಪ್ಟೆಂಬರ್ 2025, 5:11 IST
‘ರಸ್ತೆ ಗುಂಡಿಗಳ ಜೊತೆ ಸೆಲ್ಫಿ’ ಅಭಿಯಾನಕ್ಕೆ ಕುತ್ಯಾರು ನವೀನ್ ಶೆಟ್ಟಿ  ಚಾಲನೆ ನೀಡಿದರು 
‘ರಸ್ತೆ ಗುಂಡಿಗಳ ಜೊತೆ ಸೆಲ್ಫಿ’ ಅಭಿಯಾನಕ್ಕೆ ಕುತ್ಯಾರು ನವೀನ್ ಶೆಟ್ಟಿ  ಚಾಲನೆ ನೀಡಿದರು    

ಉಡುಪಿ: ರಸ್ತೆ ಗುಂಡಿಗಳನ್ನು ತಕ್ಷಣ ಮುಚ್ಚುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿರುವ ‘ರಸ್ತೆ ಗುಂಡಿಗಳ ಜೊತೆ ಸೆಲ್ಫಿ’ ಅಭಿಯಾನಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಮಂಗಳವಾರ ಚಾಲನೆ ನೀಡಿದರು.

ರಸ್ತೆ ಗುಂಡಿಗಳ ಜೊತೆಗಿನ ಸೆಲ್ಫಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಅವರು ಚಾಲನೆ ನೀಡಿದರು.

‘ಕೇವಲ ಸ್ವಯಂ ಘೋಷಿತ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ರಸ್ತೆಗಳ ಗುಂಡಿ ಮುಚ್ಚಲೂ ಹಣವಿಲ್ಲದೇ ನೈಜ ದಿವಾಳಿತನ ಪ್ರದರ್ಶಿಸಿದೆ’ ಎಂದು ಅವರು ಹೇಳಿದ್ದಾರೆ.

ADVERTISEMENT

‘ರಸ್ತೆಗಳ ಗುಂಡಿಗಳನ್ನು ಮುಚ್ಚಲೂ ರಾಜ್ಯ ಸರ್ಕಾರ ಯಾವುದೇ ಅನುದಾನವನ್ನು ನೀಡದೇ ಇರುವ ಬಗ್ಗೆ ಕಾಂಗ್ರೆಸ್ ಶಾಸಕರೇ ಅನೇಕ ಸಂದರ್ಭಗಳಲ್ಲಿ ಬಹಿರಂಗವಾಗಿ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ’ ಎಂದು ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.