ADVERTISEMENT

ಕಾಮನ್‌ವೆಲ್ತ್‌ ಪವರ್‌ಲಿಫ್ಟಿಂಗ್‌ ಚಾಂಪಿಯನ್: ಉಡುಪಿಯ ಪ್ರತೀಕ್ಷಾಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 14:27 IST
Last Updated 7 ಡಿಸೆಂಬರ್ 2022, 14:27 IST
ನ್ಯೂಜಿಲೆಂಡ್‌ನ ಆಕ್ಲೆಂಡ್‌ನಲ್ಲಿ ಈಚೆಗೆ ನಡೆದ ಕಾಮನ್‌ವೆಲ್ತ್‌ ಪವರ್‌ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿಯ ಡಾ.ಜಿ.ಶಂಕರ್‌ ಸರ್ಕಾರಿ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ನ್ಯೂಜಿಲೆಂಡ್‌ನ ಆಕ್ಲೆಂಡ್‌ನಲ್ಲಿ ಈಚೆಗೆ ನಡೆದ ಕಾಮನ್‌ವೆಲ್ತ್‌ ಪವರ್‌ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿಯ ಡಾ.ಜಿ.ಶಂಕರ್‌ ಸರ್ಕಾರಿ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.   

ಉಡುಪಿ: ನ್ಯೂಜಿಲೆಂಡ್‌ನ ಆಕ್ಲೆಂಡ್‌ನಲ್ಲಿ ಈಚೆಗೆ ನಡೆದ ಕಾಮನ್‌ವೆಲ್ತ್‌ ಪವರ್‌ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿಯ ಡಾ.ಜಿ.ಶಂಕರ್‌ ಸರ್ಕಾರಿ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ಮಹಿಳೆಯರ ಜೂನಿಯರ್‌ 84 ಕೆ.ಜಿ ವಿಭಾಗದಲ್ಲಿ ಎಕ್ವಿಪ್ಟ್‌ ಪವರ್‌ಲಿಫ್ಟಿಂಗ್‌ನಲ್ಲಿ ಪ್ರಥಮ ಸ್ಥಾನ, ಸ್ಕ್ವಾಟ್‌ನಲ್ಲಿ 193 ಕೆ.ಜಿ ಭಾರ ಎತ್ತುವ ಮೂಲಕ ಕೂಟ ದಾಖಲೆ ನಿರ್ಮಿಸಿದ್ದಾರೆ. ಇಕ್ವಿಪ್ಟ್‌ ಹಾಗೂ ಅನ್‌ ಎಕ್ವಿಪ್ಟ್‌ ಬೆಚ್‌ಪ್ರೆಸ್‌ ಸ್ಪರ್ಧೆಯಲ್ಲಿ ಬಂಗಾರದ ಪದಕದ ಜತೆಗೆ ಬಲಶಾಲಿ ಮಹಿಳೆ ಎಂಬ ಟೈಟಲ್ ದೊರೆಯಿತು ಎಂದು ಪ್ರತೀಕ್ಷಾ ತಿಳಿಸಿದರು.

ಈ ಸಾಧನೆಗೆ ಪೋಷಕರು, ಕೋಚ್‌, ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ಶಿಕ್ಷಕರು, ಕ್ರೀಡೆ ಹಾಗೂ ಯುವ ಸಬಲೀಕರಣ ಇಲಾಖೆ ಉಪ ನಿರ್ದೇಶಕರು ಹಾಗೂ ಸಿಬ್ಬಂದಿ ಪ್ರೋತ್ಸಾಹ ಕಾರಣ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.