
ಬ್ರಹ್ಮಾವರ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ, ತಾಲ್ಲೂಕು ಘಟಕದ ಆಶ್ರಯದಲ್ಲಿ ಸಾಹಿತ್ಯ ಪ್ರೇರಣೆ ಕಾರ್ಯಕ್ರಮ ಇಲ್ಲಿನ ಎಸ್.ಎಂ.ಎಸ್ ಕನ್ನಡ ಮಾಧ್ಯಮ ಪ್ರೌಢಶಾಲೆ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಸಾಹಿತ್ಯ ಬದುಕನ್ನು ರೂಪಿಸುವ ಶಕ್ತಿ ಹೊಂದಿದ್ದು, ವಿದ್ಯಾರ್ಥಿಗಳು ಓದಿನ ಮೂಲಕ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಕಸಾಪ ಕೋಟ ಹೋಬಳಿ ಅಧ್ಯಕ್ಷ ಅಚ್ಚುತ ಪೂಜಾರಿ ಮಾತನಾಡಿ, ಸಾಹಿತ್ಯ ಸಮಾಜ ಬದಲಾವಣೆಯ ಮೂಲವಾಗಿದ್ದು, ಮಾತೃಭಾಷೆಯ ಬೆಳವಣಿಗೆಗೆ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ ಅಗತ್ಯ ಎಂದರು.
ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ರಾಮಚಂದ್ರ ಐತಾಳ ಸಾಹಿತ್ಯ ಚಳವಳಿಗಳ ಅಗತ್ಯವನ್ನು ತಿಳಿಸಿದರು. ಹುಂಡ್ಮಿಯ ನಿವೃತ್ತ ಮುಖ್ಯಶಿಕ್ಷಕ ನಾಗೇಶ ಮಯ್ಯ, ಕುಂದಾಪುರ ಘಟಕದ ಜಾನಪದ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸುಪ್ರೀತಾ ಪುರಾಣಿಕ್ ಅವರು ಸಾಹಿತ್ಯ ಸಂಘಗಳ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಹೇಗೆ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ತಿಳಿಸಿದರು.
ಮುಖ್ಯಶಿಕ್ಷಕ ವಿಷ್ಣುದಾಸ ಉಪಾಧ್ಯ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಅವಿನಾಶ ಶೆಟ್ಟಿ ನಿರೂಪಿಸಿದರು. ವಿದ್ಯಾರ್ಥಿನಿ ನಮ್ರತಾ ಸ್ವಾಗತಿಸಿದರು. ಮಹಿಮಾ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.