ಉಡುಪಿ: ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರಧಾರ್ಮಿಕ ಸ್ಥಳಗಳಲ್ಲಿ 20ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂಬ ನಿಯಮ ಜಾರಿಗೆ ತಂದಿದ್ದು, ಅದರಂತೆ ಉಡುಪಿ ಜಾಮಿಯಾ ಮಸೀದಿ ವ್ಯಾಪ್ತಿಯಲ್ಲಿ ಸಾಮೂಹಿಕ ನಮಾಜ್ ಅನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಎಲ್ಲರೂಮನೆಯಲ್ಲಿಯೇ ನಮಾಜ್ ನಿರ್ವಹಿಸುವಂತೆಉಡುಪಿ ಜಾಮಿಯಾ ಮಸೀದಿಅಧ್ಯಕ್ಷರು ಮನವಿ ಮಾಡಿದ್ದಾರೆ.
‘ಮನೆಯಲ್ಲಿಯೇ ಪ್ರಾರ್ಥಿಸಿ’
ಜಿಲ್ಲಾಡಳಿದ ಆದೇಶದಂತೆ ಜಿಲ್ಲೆಯ ಎಲ್ಲಾ ಚರ್ಚ್‌ಗಳಲ್ಲಿ ಸಾಮೂಹಿಕ ಪೂಜೆ, ಧಾರ್ಮಿಕ ಆಚರಣೆ ರದ್ದುಗೊಳಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.