ADVERTISEMENT

ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ 12ರಂದು

ಪುರಭವನದಲ್ಲಿ ಕಾರ್ಯಕ್ರಮ, ಮೂರು ಪುಸ್ತಕಗಳ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2019, 13:18 IST
Last Updated 6 ಫೆಬ್ರುವರಿ 2019, 13:18 IST
ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್‌ ಮಾತನಾಡಿದರು. ಪ್ರಜಾವಾಣಿ ಚಿತ್ರ
ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್‌ ಮಾತನಾಡಿದರು. ಪ್ರಜಾವಾಣಿ ಚಿತ್ರ   

ಉಡುಪಿ:ಕರ್ನಾಟಕ ನಾಟಕ ಅಕಾಡೆಮಿಯ 2018-19ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ಫೆ.12ರಂದು ಸಂಜೆ 4.30ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಹಿತಿ ಬರಗೂರು ರಾಮಚಂದ್ರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಚಲನಚಿತ್ರ ನಿರ್ದೇಶಕ ಎಂ.ಎಸ್.ಸತ್ಯು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ನಿರ್ದೇಶಕ ಎನ್.ಆರ್.ವಿಶುಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಪಿ.ಗಂಗಾಧರ ಸ್ವಾಮಿ ಪ್ರಸಕ್ತ ಸಾಲಿನ ಅಕಾಡೆಮಿ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅವರಿಗೆ ₹ 50,000 ನಗದು ಪುರಸ್ಕಾರ ನೀಡಲಾಗುವುದು. ರಾಜಪ್ಪ ಕಿರಗೂರು, ಬಸಪ್ಪ ಶರಣಪ್ಪ ಮದರಿ, ಹುಲಿವಾನ ಗಂಗಾಧರಯ್ಯ, ಹನುಮಂತಪ್ಪ ಬಾಗಲಕೋಟೆ, ಅಂಜಿನಪ್ಪ, ಸಾವಿತ್ರಿ ನಾರಾಯಣಪ್ಪ ಗೌಡರ, ಜಕಾವುಲ್ಲಾ ಗಂಡಸಿ, ಖಾಜೇಸಾಬ ನಬೀಸಾಬ ಜಂಗಿ, ಮೈಮ್ ರಮೇಶ್, ಕೆಂಚೇಗೌಡ, ಪ್ರಭಾಕರ ಕಲ್ಯಾಣಿ, ಚಿಂದೋಡಿ ಎಲ್.ಚಂದ್ರಧರ, ಡಿ.ಎಂ.ರಾಜಕುಮಾರ್, ಡಿ.ಎಲ್.ನಂಜುಂಡಸ್ವಾಮಿ, ಈಶ್ವರ ದಲ, ಮೋಹನ್ ಮಾರ್ನಡು, ಉಷಾ ಭಂಡಾರಿ, ಪ್ರಭಾಕರ ಜೋಶಿ, ಎಸ್.ಅಂಜಿನಮ್ಮ, ಡಾ.ಕೆ.ವೈ.ನಾರಾಯಣಸ್ವಾಮಿ, ಜಗದೀಶ್ ಕೆಂಗನಾಳ್, ಉಗಮ ಶ್ರೀನಿವಾಸ, ವಿಜಯಾನಂದ ಕರಡಿಗುಡ್ಡ, ಮಕಬೂಲ ಹುಣಸಿಕಟ್ಟಿ, ಎಂ.ರವಿ ಅವರು ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿತಲಾ ₹ 25,000 ನಗದು ಪುರಸ್ಕಾರ ಒಳಗೊಂಡಿದೆ ಎಂದರು.‌

ADVERTISEMENT

ಮೃತ್ಯುಂಜಯಸ್ವಾಮಿ ಹಿರೇಮಠ, ನಿಕೋಲಸ್, ಮಾಳವಾಡ, ನ.ಲಿ.ನಾಗರಾಜ್ ವಿವಿಧ ದತ್ತಿನಿಧಿಗಳ ಪ್ರಶಸ್ತಿಗೆ ಆಯ್ಕೆಯಾಗಿದ್ದು, ತಲಾ ₹ 5000 ನಗದು ಪುರಸ್ಕಾರ ಹಾಗೂ ಸನ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿಪದ್ಮಾ ಕೊಡಗು ಅವರ ‘ಉಡುಪಿ ಜಿಲ್ಲಾ ರಂಗ ಮಾಹಿತಿ’, ಬಸವರಾಜ ಬೆಂಗೇರಿ ಅವರ ‘ಅವಿಭಜಿತ ಧಾರವಾಡ ಜಿಲ್ಲಾ ರಂಗಮಾಹಿತಿ’ ಹಾಗೂ ಗಣೇಶ ಅಮೀನಗಡ ಅವರ ‘ರಹಿಮಾನವ್ವ ಕಲ್ಮನಿ’ ಪುಸ್ತಕ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ಅಕಾಡೆಮಿ ಸದಸ್ಯ ಬಾಸುಮ ಕೊಡಗು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.