
ಉಡುಪಿ: ನಗರದ ಬನ್ನಂಜೆಯಲ್ಲಿ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ ಆರೋಪದಲ್ಲಿ ಖಾಸಗಿ ಬಸ್ ಚಾಲಕನನ್ನು ಬಂಧಿಸಿ, ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶ್ರೀ ದುರ್ಗಾಂಬ ಬಸ್ ಚಾಲಕ ದೇವರಾಜ್ ಬಂಧಿತ ಆರೋಪಿ. ಕರಾವಳಿ ಜಂಕ್ಷನ್-ಉಡುಪಿ ರಾಷ್ಟ್ರೀಯ ಹೆದ್ದಾರಿ-169 ಎ ಯ ಬನ್ನಂಜೆ ಬಳಿ ಈತ ಮಂಗಳವಾರ ಅಪಾಯಕರ ರೀತಿಯಲ್ಲಿ ಬಸ್ ಚಾಲನೆ ಮಾಡಿಕೊಂಡು ಬಂದಿದ್ದು, ಬನ್ನಂಜೆ ಜಯಲಕ್ಷ್ಮಿ ಸಿಲ್ಕ್ ಬಳಿ ಬಸ್ ನಿಯಂತ್ರಣ ತಪ್ಪಿ ತಿರುಗಿ ನಿಂತಿದೆ.
ಬಳಿಕ ಆರೋಪಿ ಬಸ್ ಅನ್ನು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಉಡುಪಿ ಕಡೆಗೆ ಹೋಗಿರುವುದು ವಿಡಿಯೊದಲ್ಲಿ ಸೆರೆಯಾಗಿತ್ತು. ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಹರಿದಾಡಿತ್ತು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.