ಹೆಬ್ರಿ: ಮುದ್ರಾಡಿಯ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಕಲ್ಪನಾ ಪರಿಸರ ಸಂಘದ ಆಶ್ರಯದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮುದ್ರಾಡಿ ವಿದ್ಯಾಸಾಗರ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಅಶೋಕ ಕುಮಾರ್ ಶೆಟ್ಟಿ, ಏಕ ಬಳಕೆಯ ಪ್ಲಾಸ್ಟಿಕ್ ಬಳಸುವುದನ್ನು ಕಡಿಮೆ ಮಾಡುವ ಪ್ರತಿಜ್ಞೆ ಮಾಡೋಣ ಎಂದ ಅವರು, ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂದರು.
ಪರಿಸರ ದಿನದ ಪ್ರಯುಕ್ತ ನಡೆಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪರಿಸರ ಸಂಘದ ಅಧ್ಯಕ್ಷ ಮಣಿಕಂಠ, ಆನಂದ ಪಿ.ವಿ., ರಘುಪತಿ ಹೆಬ್ಬಾರ್, ಮಹೇಶ್ ಕಾನ್ಗುಂಡಿ ಇದ್ದರು.
ಶಿಕ್ಷಕ ಮಹೇಶ ನಾಯ್ಕ ಕೆ. ಸ್ವಾಗತಿಸಿದರು. ಪರಿಸರ ಸಂಘದ ಮಾರ್ಗದರ್ಶಿ ಶಿಕ್ಷಕಿ ಶ್ಯಾಮಲಾ ನಿರೂಪಿಸಿದರು. ಶಿಕ್ಷಕಿ ಚಂದ್ರಕಾಂತಿ ಹೆಗ್ಡೆ ಕಡ್ತಲ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.