ADVERTISEMENT

ಮದ್ಯ ನಿಷೇಧ ಒತ್ತಾಯಕ್ಕೆ ಮಹತ್ವ ಕೊಡಬೇಕಿಲ್ಲ: ಬಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 4 ಮೇ 2020, 16:34 IST
Last Updated 4 ಮೇ 2020, 16:34 IST
ಕೃಷಿ ಸಚಿವ ಬಿ.ಸಿ.ಪಾಟೀಲ
ಕೃಷಿ ಸಚಿವ ಬಿ.ಸಿ.ಪಾಟೀಲ   

ಉಡುಪಿ: ‘ರಾಜ್ಯದಲ್ಲಿ ಕೊರೊನಾದಿಂದ ಸತ್ತವರಿಗಿಂತ ಮದ್ಯ ಸಿಗದೆ ಸತ್ತವರ ಸಂಖ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ ಶಾಶ್ವತ ಮದ್ಯ ನಿಷೇಧ ಬೇಡಿಕೆಗೆ ಹೆಚ್ಚು ಮಹತ್ವ ಕೊಡುವ ಅಗತ್ಯವಿಲ್ಲ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಮದ್ಯ ದೇವಾನುದೇವತೆಗಳ ಕಾಲದಿಂದಲೂ ಬಳಕೆಯಲ್ಲಿದೆ. ಮದ್ಯಬೇಕು ಎಂಬ ಜನರ ಬೇಡಿಕೆ ಹಾಗೂ ಆದಾಯ ಸಂಗ್ರಹ ದೃಷ್ಟಿಯಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದರು.

‘ರಾಜ್ಯದಲ್ಲಿ ಮದ್ಯ ಸಂಪೂರ್ಣ ನಿಷೇಧವಾಗಿರಲಿಲ್ಲ. ಲಾಕ್‌ಡೌನ್ ಅವಧಿಯಲ್ಲಿ ತಾತ್ಕಾಲಿಕವಾಗಿ ಮಾರಾಟ ನಿಲ್ಲಿಸಲಾಗಿತ್ತು. ಈಗ ಮತ್ತೆ ಆರಂಭಿಸಲಾಗಿದೆ ಅಷ್ಟೆ’ ಎಂದು ಹೇಳಿದರು.

ADVERTISEMENT

ಚಿತ್ರೋದ್ಯಮ ಆರಂಭಕ್ಕೆ ಒತ್ತಾಯವಿದ್ದು, ಕಲಾವಿದರು ಅಂತರ ಕಾಯ್ದುಕೊಳ್ಳುವುದು ಕಷ್ಟ ಎಂಬ ಕಾರಣಕ್ಕೆ ಅವಕಾಶ ನೀಡಿಲ್ಲ. ಪರಿಸ್ಥಿತಿ ಸುಧಾರಣೆಯಾದ ಬಳಿಕ ಚಿತ್ರೋದ್ಯಮ ಆರಂಭವಾಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.