ADVERTISEMENT

ಉಡುಪಿ | ಜವಾಬ್ದಾರಿಯುತ ಆಡಳಿತ ನೀಡುವೆ: ನೂತನ ಜಿಲ್ಲಾಧಿಕಾರಿ ಸ್ವರೂಪ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 13:50 IST
Last Updated 19 ಜೂನ್ 2025, 13:50 IST
ಸ್ವರೂಪ ಟಿ.ಕೆ.
ಸ್ವರೂಪ ಟಿ.ಕೆ.   

ಉಡುಪಿ: ‘ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತೇನೆ ಮತ್ತು ಜವಾಬ್ದಾರಿಯುತ ಆಡಳಿತ ನೀಡುತ್ತೇನೆ’ ಎಂದು ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.

ಮಾಧ್ಯಮದವರ ಜೊತೆಗೆ ಗುರುವಾರ ಮಾತನಾಡಿದ ಅವರು, ‘ನಾನು ಕೈಗಾರಿಕಾ ಕ್ಷೇತ್ರದ ಹಿನ್ನೆಲೆಯಿಂದ ಬಂದಿದ್ದೇನೆ. ಅಲ್ಲೂ ಆಡಳಿತಾತ್ಮಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುವ ಕಾರಣ ಹೊಸ ಜವಾಬ್ದಾರಿ ಅಷ್ಟೇನು ಸವಾಲಾಗದು’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಗೆ ಸಂಬಂಧಪಟ್ಟಂತೆ ಎಲ್ಲ ಕ್ಷೇತ್ರಗಳ ಮಾಹಿತಿ ಪಡೆದುಕೊಂಡು, ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇನೆ. ಜಿಲ್ಲೆಯಲ್ಲಿರುವ ಬುಡಕಟ್ಟು ಜನರ ಸಮಸ್ಯೆಗಳ ಪರಿಹಾರಕ್ಕೂ ಪ್ರಾಶಸ್ತ್ಯ ನೀಡಲಾಗುವುದು ಎಂದರು.

ADVERTISEMENT

ಕರಾವಳಿ ಜಿಲ್ಲೆಯಾದ ಉಡುಪಿಯಲ್ಲಿ ಮಳೆಗಾಲದಲ್ಲಿ ನೆರೆ, ಕಡಲ್ಕೊರೆತ ಮೊದಲಾದ ಸಮಸ್ಯೆಗಳು ಎದುರಾಗಲಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಪರಿಸರಕ್ಕೆ ಪೂರಕವಾದ ಕೈಗಾರಿಕೆಗಳಿಗೆ ಅವಕಾಶಗಳಿವೆಯೇ ಎಂಬುದರ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.