ಉಡುಪಿ: ಕೋಟ ವಸಂತ ಗಿಳಿಯಾರ್ ಎಂಬುವವರ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದ ಪ್ರಚೋದನಕಾರಿ ಪೋಸ್ಟ್ ಅನ್ನು ರೀ ಪೋಸ್ಟ್ ಮಾಡಿದ ಆರೋಪದಲ್ಲಿ ವಡ್ಡರ್ಸೆಯ ಶರತ್ ಶೆಟ್ಟಿ ಎಂಬುವವರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಸಂತ ಗಿಳಿಯಾರ್ ಎಂಬುವವರು ಫೇಸ್‌ಬುಕ್ ಖಾತೆಯಲ್ಲಿ ಧರ್ಮ ಧರ್ಮಗಳ ಮಧ್ಯೆ ಎತ್ತಿಕಟ್ಟಿ ಕೋಮು ಗಲಭೆಯನ್ನು ಸೃಷ್ಟಿಸುವಂತಹ ಪೋಸ್ಟ್ ಮಾಡಿದ್ದರು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಪೋಸ್ಟ್ ಅನ್ನು ಶರತ್ ಶೆಟ್ಟಿ ಅವರು ರೀ ಪೋಸ್ಟ್ ಮಾಡಿದ್ದಾರೆ ಎಂದು ದೂರಲಾಗಿದೆ.
196(1)(ಎ), 353(2) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.