
ಪ್ರಜಾವಾಣಿ ವಾರ್ತೆ
ಬ್ರಹ್ಮಾವರ (ಉಡುಪಿ): ಸಾಮಾಜಿಕ ಜಾಲತಾಣದಲ್ಲಿ ದ್ವೇಷ, ಅಶಾಂತಿ ಉಂಟುಮಾಡುವ ಉದ್ದೇಶದಿಂದ ಪ್ರಚೋದನಾತ್ಮಕ ಪೋಸ್ಟ್‌ಗಳನ್ನು ಹರಡಿದ ಆರೋಪದಡಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ವಾರಂಬಳ್ಳಿ ಮೂಡುಗರಡಿಯ ಸಂತೋಷ ಕುಮಾರ್ ಶೆಟ್ಟಿ (56), ಕೋಟೇಶ್ವರದ ಕೆ. ನಾಗರಾಜ (62) ಬಂಧಿತರು. ಬ್ರಹ್ಮಾವರದ ಸಬ್‌ಇನ್‌ಸ್ಪೆಕ್ಟರ್ ಅಶೋಕ ಮಾಳಾಬಗಿ, ಸುದರ್ಶನ್ ದೊಡ್ಡಮನಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.