ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: 12,976 ಹಾಜರು

ಕಂಟೈನ್‌ಮೆಂಟ್‌ ಪ್ರದೇಶಗಳಿಂದ ಬಂದು ಪರೀಕ್ಷೆ ಬರೆದ 10 ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 15:56 IST
Last Updated 29 ಜೂನ್ 2020, 15:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಜಿಲ್ಲೆಯಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ವಿಜ್ಞಾನ ವಿಷಯದ ಪರೀಕ್ಷೆಯಲ್ಲಿ 12,976 ವಿದ್ಯಾರ್ಥಿಗಳು ಹಾಜರಾಗಿದ್ದು, 109 ಮಕ್ಕಳು ಗೈರಾಗಿದ್ದಾರೆ.

ಒಟ್ಟು 13,768 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದರು. ಹೊರ ಜಿಲ್ಲೆಗಳ 82 ವಲಸೆ ಕಾರ್ಮಿಕರ ಮಕ್ಕಳು ಪರೀಕ್ಷೆ ಬರೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೈಂದೂರು ಕಂಟೈನ್‌ಮೆಂಟ್ ಝೋನ್‌ನಿಂದ 3, ಕುಂದಾಪುರದಿಂದ 1, ಕಾರ್ಕಳದಿಂದ 2, ಉಡುಪಿ ಉತ್ತರದಿಂದ ಇಬ್ಬರು ಹಾಗೂ ದಕ್ಷಿಣದಿಂದ ಒಬ್ಬ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿದ್ದು, ಅನಾರೋಗ್ಯ ಸಮಸ್ಯೆಗಳಿದ್ದ 6 ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಯಾವುದೇ ಪರೀಕ್ಷಾ ಅಕ್ರಮಗಳು ನಡೆದಿಲ್ಲ. ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆತರಲು 82 ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತುಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.