ADVERTISEMENT

31ರಂದು ಪಲ್ಸ್ ಪೋಲಿಯೋ

ಜಿಲ್ಲೆಯಲ್ಲಿ 74,049 ಮಕ್ಕಳಿಗೆ ಪೋಲಿಯೋ ಲಸಿಕೆ: ಜಿಲ್ಲಾಧಿಕಾರಿ ಜಿ.ಜಗದೀಶ್

​ಪ್ರಜಾವಾಣಿ ವಾರ್ತೆ
Published 28 ಜನವರಿ 2021, 13:34 IST
Last Updated 28 ಜನವರಿ 2021, 13:34 IST

ಉಡುಪಿ: ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 74,049 ಮಕ್ಕಳಿಗೆ ಜ.31ರಂದು ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಲಸಿಕೆ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ ಜಿಲ್ಲೆಯಲ್ಲಿ 657 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ 585, ನಗರ ಪ್ರದೇಶಗಳಲ್ಲಿ 72 ಕೇಂದ್ರಗಳಿವೆ. ಜತೆಗೆ, 8 ಮೊಬೈಲ್ ತಂಡ, 37 ಟ್ರಾನ್ಸಿಟ್ ಬೂತ್‌ಗಳನ್ನು ತೆರೆಯಲಾಗುತ್ತಿದೆ. ಎಲ್ಲ ಟೋಲ್‌ಗೇಟ್‌ಗಳಲ್ಲಿಯೂ ಲಸಿಕಾ ಕೇಂದ್ರ ತೆರೆದು ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿ ತಿಳಿಸಿದರು

2,768 ಲಸಿಕಾ ಸ್ವಯಂಸೇವಕರು ಹಾಗೂ 133 ಮೇಲ್ವಿಚಾರಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಲಿದ್ದು, ಆರೋಗ್ಯ, ಪಂಚಾಯತ್ ರಾಜ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಂದಾಯ ಇಲಾಖೆ ಹಾಗೂ ಇತರ ಇಲಾಖೆ ಅಧಿಕಾರಿಗಳು, ರೋಟರಿ ಹಾಗೂ ಸ್ವಯಂಸೇವಾ ಸಂಸ್ಥೆಗಳ ಸಹಕಾರ ಪಡೆಯಲಾಗುವುದು ಎಂದರು.

ADVERTISEMENT

ಸಾರ್ವಜನಿಕರು ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಗ್ರಾಮಾಂತರ ಪ್ರದೇಶದಲ್ಲಿ ಫೆ.1 ಹಾಗೂ 2, ನಗರ ಪ್ರದೇಶಗಳಲ್ಲಿ ಫೆ. 1ರಿಂದ 3ರವರೆಗೆ ಸ್ವಯಂಸೇವಕರು ಮನೆ ಮನೆಗೆ ಭೇಟಿ ನೀಡಿ ಪಲ್ಸ್ ಪೋಲಿಯೋ ಹನಿ ಹಾಕಿಸಿಸಿಕೊಂಡಿದ್ದಾರೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.