ADVERTISEMENT

ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ|ಅಭಿಯಾನ ವಿಶ್ವಕ್ಕೆ ಮಾದರಿಯಾಗಲಿ:ಅಬೀದ್ ಗದ್ಯಾಳ್

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 4:28 IST
Last Updated 22 ಡಿಸೆಂಬರ್ 2025, 4:28 IST
ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಅವರು ಮಗುವೊಂದಕ್ಕೆ ಪೋಲಿಯೊ ಲಸಿಕೆ ಹಾಕಿದರು
ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಅವರು ಮಗುವೊಂದಕ್ಕೆ ಪೋಲಿಯೊ ಲಸಿಕೆ ಹಾಕಿದರು   

ಉಡುಪಿ: ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನವು ವಿಶ್ವದ ಯಶಸ್ವಿ ಅಭಿಯಾನವಾಗಿದ್ದು, ಮುಂದೆಯೂ ಇದೇ ರೀತಿಯಾಗಿ ಪೋಲಿಯೊ ಪ್ರಸರಣವನ್ನು ತಡೆಗಟ್ಟಿ ವಿಶ್ವಕ್ಕೆ ಮಾದರಿಯಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಂಯುಕ್ತ ಆಶ್ರಯದಲ್ಲಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 5 ವರ್ಷದೊಳಗಿನ 75,395 ಮಕ್ಕಳನ್ನು ಲಸಿಕೆ ನೀಡಲು ಗುರುತಿಸಲಾಗಿದ್ದು, ಅದಕ್ಕಾಗಿ 657 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಒಂದು ಮಗು ಕೂಡ ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಭಾರತವು ಪೋಲಿಯೊ ರೋಗ ಮುಕ್ತವಾಗಿದ್ದರೂ ನೆರೆಯ ರಾಷ್ಟ್ರಗಳಲ್ಲಿ ಈ ರೋಗದ ಪ್ರಕರಣಗಳು ಇನ್ನೂ ಜೀವಂತವಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನವನ್ನು ದೇಶಾದ್ಯಂತ ವ್ಯಾಪಕವಾಗಿ ನಡೆಸಲಾಗುತ್ತಿದೆ ಎಂದು ಹೇಳಿದರು.

ADVERTISEMENT

ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವು ಯಶಸ್ವಿಯಾಗಿ ಕಾರ್ಯಗತವಾಗುತ್ತಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ ಎಂದರು.

ಈ ಸಂದರ್ಭದಲ್ಲಿ ನವಜಾತ ಶಿಶುಗಳಿಗೆ ಪೋಲಿಯೊ ಲಸಿಕೆ ನೀಡಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಶೋಕ್ ಕುಮಾರ್, ಬೆಂಗಳೂರು ಆರೋಗ್ಯ ಇಲಾಖೆ ಉಪನಿರ್ದೇಶಕ ಸುರೇಶ್ ಶಾಸ್ತ್ರಿ, ಸುಬ್ರಹ್ಮಣ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅನುರಾಧಾ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸಂದೀಪ್ ಉಪಸ್ಥಿತರಿದ್ದರು.

ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ. ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್. ನಿರೂಪಿಸಿದರು. ಜೆ.ಸೂರಜ್ ಕುಮಾರ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.